varthabharthiನಿಧನ

ಡಾ.ಪ್ರಭಾಶ್‍ ಕುಮಾರ್

ವಾರ್ತಾ ಭಾರತಿ : 6 Apr, 2020

ಬೆಳ್ತಂಗಡಿ : ಉಜಿರೆ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಆಸ್ಪತ್ರೆಯ ಹಿರಿಯ ವೈದ್ಯ, ಉಜಿರೆ ಶಿವಾಜಿನಗರದ ನಿವಾಸಿ ಡಾ. ಪ್ರಭಾಶ್‍ ಕುಮಾರ್ (63) ರವಿವಾರ ರಾತ್ರಿ ಹೃದಯಾಘಾತದಿಂದ ನಿಧನ ಹೊಂದಿದ್ದಾರೆ.

ಇವರು ತನ್ನ 38 ವರ್ಷಗಳ ವೈದ್ಯಕೀಯ ವೃತ್ತಿ ಜೀವನದಲ್ಲಿ ಲಾಯಿಲ ಟಿ.ಬಿ ಆಸ್ಪತ್ರೆಯಲ್ಲಿ ಮುಖ್ಯ ವೈದ್ಯಾಧಿಕಾರಿಯಾಗಿ, ಉಜಿರೆ ಎಸ್.ಡಿ.ಎಂ ಆಸ್ಪತ್ರೆಯಲ್ಲಿ ಪ್ರಭಾರ ವೈದ್ಯಾಧಿಕಾರಿಯಾಗಿ, ಉಜಿರೆಯ ಇ.ಎಸ್.ಐಡಿ ಸ್ಪೆನ್ಸರಿಯಲ್ಲಿ ಮೆಡಿಕಲ್‍ ಆಫಿಸರ್ ಆಗಿ ಹಾಗೂ ಎಸ್.ಡಿ.ಎಂ ನ್ಯಾಚುರೋಪತಿ ಕಾಲೇಜಿನಲ್ಲಿ ಉಪನ್ಯಾಸಕರಾಗಿ, ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ವ್ಯಸನಮುಕ್ತಿ ಮತ್ತು ಸಂಶೋಧನ ಕೇಂದ್ರದಲ್ಲಿ ವೈದ್ಯಕೀಯ ಸಲಹೆಗಾರರಾಗಿ ಕರ್ತವ್ಯ ನಿರ್ವಹಿಸಿದ್ದಾರೆ.

ಮೃತರು ಪತ್ನಿ, ಓರ್ವ ಪುತ್ರನನ್ನು ಅಗಲಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)