varthabharthi

ಕರ್ನಾಟಕ

ಕೊರೋನ ಕರ್ತವ್ಯದಲ್ಲಿದ್ದ ಆರೋಗ್ಯ ನಿರೀಕ್ಷಕ ಕುಸಿದು ಬಿದ್ದು ಸಾವು

ವಾರ್ತಾ ಭಾರತಿ : 6 Apr, 2020

ಕೊಲಾರ, ಎ.6: ಕೊರೋನ ವೈರಸ್ ಕರ್ತವ್ಯದಲ್ಲಿದ್ದ ಆರೋಗ್ಯ ನಿರೀಕ್ಷಕ ಎದೆ ನೋವಿನಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಜಿಲ್ಲೆಯ ಮುಳಬಾಗಿಲು ತಾಲೂಕಿನ ಹೆಬ್ಬಣಿ ಚೆಕ್ ಪೋಸ್ಟ್ ನಲ್ಲಿ ನಡೆದಿದೆ.

ಸರವಣಂ(45) ಮೃತಪಟ್ಟ ಆರೋಗ್ಯ ನಿರೀಕ್ಷಕ. ಮುಳಬಾಗಿಲು ತಾಲೂಕಿನ ಊರುಕುಂಟೆ ಮಿಟ್ಟೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಸರವಣಂ ಕೆಲಸ ಮಾಡುತ್ತಿದ್ದರು.

ರಾಜ್ಯದಲ್ಲಿ ಕೊರೋನ ವೈರಸ್ ಸೋಂಕು ಕಾಣಿಸಿಕೊಂಡ ದಿನದಿಂದ ಮಿಟ್ಟೂರು ಗ್ರಾಮದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ಕೊರೋನ ವೈರಸ್ ಕರ್ತವ್ಯದಲ್ಲಿದ್ದರು. ಅದೇ ರೀತಿ ಸರವಣಂ ಭಾನುವಾರ ರಾತ್ರಿ ಕೂಡ ಕೊರೋನ ಸಂಬಂಧ ಕರ್ತವ್ಯದಲ್ಲಿದ್ದರು. ಈ ವೇಳೆ ಎದೆನೋವಿನಿಂದ ಕುಸಿದು ಬಿದ್ದಿದ್ದಾರೆ. ತಕ್ಷಣ ಅವರನ್ನು ಆಸ್ಪತ್ರೆಯಲ್ಲಿ ಪರೀಕ್ಷೆ ಮಾಡಲಾಗಿದೆ. ಆದರೆ, ಅಷ್ಟರಲ್ಲಿಯೇ ಸರವಣಂ ಅವರು ಮೃತಪಟ್ಟಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)