varthabharthi

ಬೆಂಗಳೂರು

ರಾಜ್ಯದಲ್ಲಿ ಇನ್ನೂರರ ಗಡಿ ದಾಟಿದ ಕೊರೋನ ಸೋಂಕಿತರ ಸಂಖ್ಯೆ

ವಾರ್ತಾ ಭಾರತಿ : 10 Apr, 2020

ಬೆಂಗಳೂರು, ಎ.10: ರಾಜ್ಯದಲ್ಲಿ ಕೊರೋನ ಸೋಂಕಿತರ ಸಂಖ್ಯೆಯಲ್ಲಿ ಏರಿಕೆ ಕಂಡುಬಂದಿದ್ದು, ಗುರುವಾರ ಸಂಜೆ 5ರಿಂದ ಶುಕ್ರವಾರ ಮಧ್ಯಾಹ್ನ 12 ಗಂಟೆಯೊಳಗೆ 10 ಹೊಸ ಪ್ರಕರಣಗಳು ವರದಿಯಾಗಿವೆ ಎಂದು ಆರೋಗ್ಯ ಇಲಾಖೆಯ ಪ್ರಕಟನೆ ತಿಳಿಸಿದೆ.

ರಾಜ್ಯದಲ್ಲಿ ಒಟ್ಟು ಕೊರೋನ ಸೋಂಕಿತರ ಸಂಖ್ಯೆ 207ಕ್ಕೇರಿದೆ. ಈ ಪೈಕಿ 6 ಮಂದಿ ಮೃತಪಟ್ಟಿದ್ದರೆ, 30 ಸೋಂಕಿತರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ ಎಂದು ಪ್ರಕಟನೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)