varthabharthi

ನಿಧನ

ಪಿ.ಕೆ. ಲೋಹಿತ್ ಪೂಜಾರಿ

ವಾರ್ತಾ ಭಾರತಿ : 17 Apr, 2020

ಮಂಗಳೂರು: ನಗರದಲ್ಲಿರುವ ಪಿ.ಕೆ. ದೂಜ ಪೂಜಾರಿ ಟೆಕ್ಸ್‌ಟೈಲ್ಸ್ ಮಾಲಕ ಪಿ.ಕೆ. ಲೋಹಿತ್ ಪೂಜಾರಿಯವರು ಅಲ್ಪಕಾಲದ ಅಸೌಖ್ಯದಿಂದ ಶುಕ್ರವಾರ ಬೆಳಗ್ಗಿನ ಜಾವ ನಿಧನರಾದರು.

ಇವರು ಕುದ್ರೋಳಿ ಶ್ರೀ ಗೋಕರ್ಣನಾಥ ದೇವಸ್ಥಾನದ ಕ್ಷೇತ್ರಾಭಿವೃದ್ಧಿ ಸಮಿತಿ ಹಾಗೂ ವೆಂಕಟೇಶ ಶಿವಭಕ್ತಿ ಯೋಗ ಸಂಘದ ಸದಸ್ಯರಾಗಿ ದ್ದರು. ಕುದ್ರೋಳಿ ಕ್ಷೇತ್ರದ ಭಕ್ತರಾಗಿದ್ದ ಇವರು ಕ್ಷೇತ್ರದ ಅಭಿವೃದ್ಧಿ ಕಾರ್ಯವಲ್ಲದೆ ವರ್ಷದ ನಾನಾ ಉತ್ಸವಗಳು, ಸಾಮಾಜಿಕ ಕಾರ್ಯಕ್ಕೆ ಸಹಕಾರ ನೀಡುತ್ತಿದ್ದರು. ಶಿಕ್ಷಣ, ಆರೋಗ್ಯ, ಸಾಮಾಜಿಕ, ಧಾರ್ಮಿಕ ಕ್ಷೇತ್ರಕ್ಕೂ ತನ್ನಿಂದಾದ ಸಹಕಾರವನ್ನು ನೀಡುತ್ತಾ ಬಂದಿದ್ದ ಇವರು ಕೊಡುಗೈದಾನಿಗಳಾಗಿದ್ದರು.

ಮೃತರಿಗೆ ಪತ್ನಿ, ಇಬ್ಬರು ಪುತ್ರಿಯರು ಇದ್ದಾರೆ.

ಅಂತಿಮ ದರ್ಶನ: ಕೇಂದ್ರದ ಮಾಜಿ ಸಚಿವ ಬಿ. ಜನಾರ್ದನ ಪೂಜಾರಿಯವರ ನಿಕಟವರ್ತಿಯಾಗಿದ್ದರು. ಮಾಜಿ ಶಾಸಕ ಜೆ.ಆರ್. ಲೋಬೊ, ಕುದ್ರೋಳಿ ಕ್ಷೇತ್ರದ ಅಧ್ಯಕ್ಷ ಎಚ್.ಎಸ್. ಸಾಯಿರಾಂ, ಕೋಶಾಧಿಕಾರಿ ಪದ್ಮರಾಜ್ ಮತ್ತಿತರರು ಮೃತರ ಅಂತಿಮ ದರ್ಶನ ಪಡೆದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)