ಹೆನ್ಸನ್ ಕಾಂಚನ್
ಉಡುಪಿ, ಎ.23: ಉಡುಪಿ ಜಿಲ್ಲಾ ಸರಕಾರಿ ವಾಹನ ಚಾಲಕರ ಸಂಘದ ಅಧ್ಯಕ್ಷರಾಗಿದ್ದ ಹೆನ್ಸನ್ ಕಾಂಚನ್ (63) ಅನಾರೋಗ್ಯದ ಕಾರಣ ಎ.21ರಂದು ನಿಧನರಾದರು. ಅವರು ಪತ್ನಿ, ಇಬ್ಬರು ಪುತ್ರರು ಹಾಗೂ ಪುತ್ರಿಯನ್ನು ಅಗಲಿದ್ದಾರೆ.
ಹೆನ್ಸನ್, ಉಡುಪಿ ಜಿಲ್ಲಾ ಸರಕಾರಿ ವಾಹನ ಚಾಲಕರ ಸಂಘದ ಅಧ್ಯಕ್ಷ, ಗೌರವಾಧ್ಯಕ್ಷ ಮತ್ತು ಸರಕಾರಿ ನೌಕರರ ಸಂಘದ ಪದಾಧಿಕಾರಿ ಯಾಗಿದ್ದರು. ಇವರ ನಿಧನಕ್ಕೆ ಉಡುಪಿ ಜಿಲ್ಲಾ ಸರಕಾರಿ ನೌಕರರ ಸಂಘದ ಅಧ್ಯಕ್ಷ ಸುಬ್ರಹ್ಮಣ್ಯ ಶೇರಿಗಾರ್ ಹಾಗೂ ಸಂಘದ ಪದಾಧಿಕಾರಿ ಗಳು ತೀವ್ರಸಂತಾಪ ವ್ಯಕ್ತಪಡಿಸಿದ್ದಾರೆ.
Next Story