varthabharthiಸಿನಿಮಾ

ಲಾಕ್ ಡೌನ್ ನಿಂದ ಅಂತ್ಯಕ್ರಿಯೆಯಲ್ಲಿ ಪಾಲ್ಗೊಳ್ಳದ ನಟ

ಬಾಲಿವುಡ್ ನಟ ಇರ್ಫಾನ್ ಖಾನ್ ತಾಯಿ ನಿಧನ

ವಾರ್ತಾ ಭಾರತಿ : 26 Apr, 2020

ಹೊಸದಿಲ್ಲಿ: ಬಾಲಿವುಡ್ ನಟ ಇರ್ಫಾನ್ ಖಾನ್ ಅವರ ತಾಯಿ ಸಯೀದಾ ಬೇಗಂ ಜೈಪುರ್ ನಲ್ಲಿ ಅನಾರೋಗ್ಯದಿಂದ ನಿಧನರಾಗಿದ್ದಾರೆ.

ಆದರೆ ಲಾಕ್ ಡೌನ್ ಕಾರಣ ಇರ್ಫಾನ್ ಮುಂಬೈಯಲ್ಲಿ ಉಳಿದುಕೊಂಡಿದ್ದಾರೆ ಎನ್ನಲಾಗಿದೆ. ಹೀಗಾಗಿ ತಾಯಿಯ ಅಂತ್ಯಕ್ರಿಯೆಯಲ್ಲಿ ಭಾಗವಹಿಸಲು ಇರ್ಫಾನ್ ಗೆ ಸಾಧ್ಯವಾಗಿಲ್ಲ.

“ಸಯೀದಾ ಬೇಗಂ, ಇರ್ಫಾನ್ ಖಾನ್ ಅವರ ತಾಯಿ ನಿಧನರಾಗಿದ್ದಾರೆ. ಅವರ ಆತ್ಮಕ್ಕೆ ಶಾಂತಿ ಲಭಿಸಲಿ” ಎಂದು ಬಾಲಿವುಡ್ ಟ್ರೇಡ್ ಅನಾಲಿಸ್ಟ್ ಕೋಮಲ್ ನಹ್ತಾ ಟ್ವಿಟರ್ ನಲ್ಲಿ ಮಾಹಿತಿ ನೀಡಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)