varthabharthi

ಮಾಹಿತಿ - ಮಾರ್ಗದರ್ಶನ

ಗುತ್ತಿಗೆ ಆಧಾರದಲ್ಲಿ ವೈದ್ಯಾಧಿಕಾರಿ ಹುದ್ದೆಗೆ ಅರ್ಜಿ ಆಹ್ವಾನ

ವಾರ್ತಾ ಭಾರತಿ : 7 May, 2020

ಉಡುಪಿ, ಮೇ 7: ಉಡುಪಿ ಜಿಲ್ಲೆಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರ, ಸಮುದಾಯ ಆರೋಗ್ಯ ಕೇಂದ್ರ, ಸಾರ್ವಜನಿಕ ಆಸ್ಪತ್ರೆಯಲ್ಲಿ ತೆರವು ಇರುವ ಒಟ್ಟು ಐದು ವೈದ್ಯಾಧಿಕಾರಿ ಹುದ್ದೆಗೆ ಎಂಬಿಬಿಎಸ್ ವಿದ್ಯಾರ್ಹತೆ ಹೊಂದಿರುವ ಸಾಮಾನ್ಯ ಕರ್ತವ್ಯದ ವೈದ್ಯಾಧಿಕಾರಿಯವರನ್ನು ಗುತ್ತಿಗೆ ಆಧಾರದ ಮೇಲೆ ಒಂದು ವರ್ಷದ ಅವಧಿಗೆ ಅಥವಾ ನೇರ ನೇಮಕಾತಿ ಆಗುವವರೆಗೆ/ಖಾಯಂ ವೈದ್ಯರು ವರ್ಗಾವಣೆಯಿಂದ ಹುದ್ದೆ ಭರ್ತಿಯಾದಲ್ಲಿ (ಯಾವುದು ಮೊದಲೊ ಅಲ್ಲಿಯವರೆಗೆ) ನೇಮಕಾತಿ ಮಾಡಲು ಆಸಕ್ತ ಅರ್ಹ ವೈದ್ಯರಿಂದ ಅರ್ಜಿ ಗಳನ್ನು ಆಹ್ವಾನಿಸಲಾಗಿದೆ.

ಅರ್ಜಿ ನಮೂನೆಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಗಳ ಕಚೇರಿ, ಅಜ್ಜರಕಾಡು, ಜಿಲ್ಲಾಸ್ಪತ್ರೆ ಆವರಣ, ಉಡುಪಿ ಇಲ್ಲಿಂದ ಪಡೆಯಬಹುದಾಗಿದೆ. ಅರ್ಜಿ ಸಲ್ಲಿಸಲು ಮೇ 21 ಕೊನೆಯ ದಿನವಾಗಿದ್ದು, ಸಂದರ್ಶನದ ದಿನದಂದು ಖಾಲಿ ಇರುವ ಹುದ್ದೆಗಳಿಗೆ ಮಾತ್ರ ನೇಮಕಾತಿ ಮಾಡಲಾಗುವುದು.

ನೇಮಕಾತಿಗೆ ಸಂಬಂಧಿಸಿದ ಮಾಹಿತಿಯನ್ನು ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣಾಧಿಕಾರಿ, ಉಡುಪಿ ಜಿಲ್ಲೆ (ದೂ.ಸಂ:0820-2536650) ಇಲ್ಲಿಂದ ಪಡೆಯಬಹುದು ಎಂದು ಪ್ರಕಟಣೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)