ಹಾಸ್ಯನಟ ಮೈಕಲ್ ಮಧು ನಿಧನ
ಮೈಕಲ್ ಮಧು (Photo: Facebook)
ಬೆಂಗಳೂರು: ಅನಾರೋಗ್ಯದಿಂದ ಬಳಲುತ್ತಿದ್ದ ಹಾಸ್ಯನಟ ಮೈಕಲ್ ಮಧು ಅವರು ಬುಧವಾರ ರಾತ್ರಿ ಮೃತಪಟ್ಟಿದ್ದಾರೆ. ಅವರಿಗೆ 51 ವರ್ಷ ವಯಸ್ಸಾಗಿತ್ತು.
ಮಧು ಬುಧವಾರ ಮಧ್ಯಾಹ್ನ ಊಟ ಮಾಡಿದ ಬಳಿಕ ಇದ್ದಕ್ಕಿದ್ದಂತೆ ಕುಸಿದುಬಿದ್ದರು. ಕೂಡಲೇ ಅವರನ್ನು ನಗರದ ಕಿಮ್ಸ್ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿರುವುದಾಗಿ ಆಸ್ಪತ್ರೆಯ ಮೂಲಗಳು ತಿಳಿಸಿವೆ.
ಸುಪ್ರಭಾತ, ಮಿನುಗುತಾರೆ, ಪಾಪಿಗಳ ಲೋಕದಲ್ಲಿ, ಓಂ, ಎಕೆ 47, ಸೂರ್ಯವಂಶ, ನೀಲಾಂಬರಿ, ಯಮಲೋಕದಲ್ಲಿ ವೀರಪ್ಪನ್, ಮೀಸೆ ಹೊತ್ತ ಗಂಡಸಿಗೆ ಡಿಮ್ಯಾಂಡಪ್ಪೊ ಡಿಮ್ಯಾಂಡು ಸೇರಿದಂತೆ ಸುಮಾರು 300ಕ್ಕೂ ಹೆಚ್ಚು ಸಿನಿಮಾಗಳಲ್ಲಿ ನಟಿಸಿದ್ದರು.
Next Story