varthabharthi

ಬೆಂಗಳೂರು

ಬೆಂಗಳೂರು: ಅಕ್ರಮ ಗ್ಯಾಸ್ ರೀಫಿಲ್ಲಿಂಗ್ ಕೇಂದ್ರಗಳಿಗೆ ದಾಳಿ; 6 ಮಂದಿ ಬಂಧನ, 384 ಸಿಲಿಂಡರ್ ಗಳು ಜಪ್ತಿ

ವಾರ್ತಾ ಭಾರತಿ : 20 May, 2020

ಸಾಂದರ್ಭಿಕ ಚಿತ್ರ

ಬೆಂಗಳೂರು, ಮೇ 20: ನಗರದ ವಿವಿಧ ಕಡೆ ಅಕ್ರಮವಾಗಿ ನಡೆಸುತ್ತಿದ್ದ ಗ್ಯಾಸ್ ರೀಫಿಲ್ಲಿಂಗ್ ಕೇಂದ್ರಗಳ ಮೇಲೆ ದಾಳಿ ನಡೆಸಿರುವ ಸಿಸಿಬಿ ಪೊಲೀಸರು, ಆರು ಮಂದಿಯನ್ನು ಬಂಧಿಸಿ, 384 ಸಿಲಿಂಡರ್ ಗಳನ್ನು ಜಪ್ತಿ ಮಾಡುವಲ್ಲಿ ಯಶಸ್ವಿಯಾಗಿದ್ದಾರೆ.

ನಗರದ ಪೀಣ್ಯ, ಕೆಂಗೇರಿ, ಕಾಪಾಕ್ಷಿಪಾಳ್ಯ, ವಿಜಯನಗರ, ಆರ್‍ಆರ್ ನಗರ ಹಾಗೂ ರಾಜಗೋಪಾಲನಗರ ವ್ಯಾಪ್ತಿಗಳಲ್ಲಿ ಅಕ್ರಮವಾಗಿ ಗ್ಯಾಸ್ ರೀಫಿಲ್ಲಿಂಗ್ ಮಾಡುತ್ತಿದ್ದ ಬಗ್ಗೆ ಮಾಹಿತಿ ಸಂಗ್ರಹಿಸಿರುವ ಸಿಸಿಬಿ ಪೊಲೀಸರು, ದಾಳಿ ನಡೆಸಿದಾಗ ಪ್ರಕರಣ ಬೆಳಕಿಗೆ ಬಂದಿದೆ.

ಪ್ರಕರಣಕ್ಕೆ ಸಂಬಂಧಿಸಿದಂತೆ 6 ಮಂದಿಯನ್ನು ಬಂಧಿಸಲಾಗಿದ್ದು, ಕೃತ್ಯಕ್ಕೆ ಬಳಕೆ ಮಾಡುತ್ತಿದ್ದ ತೂಕದ ಯಂತ್ರ, 3.73 ಲಕ್ಷ ರೂ.ಮೌಲ್ಯದ ಗ್ಯಾಸ್ ಸಿಲಿಂಡರ್ ಗಳನ್ನು ಜಪ್ತಿ ಮಾಡಿ, ಆಯಾ ಪೊಲೀಸ್ ಠಾಣೆಗಳಲ್ಲಿ ಪ್ರಕರಣ ದಾಖಲಿಸಿ ತನಿಖೆ ಮುಂದುವರಿಸಲಾಗಿದೆ ಎಂದು ಸಿಸಿಬಿ ಪ್ರಕಟನೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)