varthabharthi

ಬೆಂಗಳೂರು

ಭಾವಚಿತ್ರಕ್ಕೆ ಬೆಂಕಿ ಹಚ್ಚಿ ಆಕ್ರೋಶ

ಬೆಂಗಳೂರು: ಸಚಿವ ಮಾಧುಸ್ವಾಮಿ ರಾಜೀನಾಮೆಗೆ ಒತ್ತಾಯಿಸಿ ಕಾಂಗ್ರೆಸ್ ಧರಣಿ

ವಾರ್ತಾ ಭಾರತಿ : 21 May, 2020

ಬೆಂಗಳೂರು, ಮೇ 21: ರೈತ ಮಹಿಳೆಗೆ ಅಶ್ಲೀಲವಾಗಿ ನಿಂದಿಸಿದ ಕಾನೂನು ಸಚಿವ ಜೆ.ಸಿ.ಮಾಧುಸ್ವಾಮಿ ಈ ಕೂಡಲೇ ರಾಜೀನಾಮೆ ನೀಡಬೇಕು ಎಂದು ಒತ್ತಾಯಿಸಿ ಕಾಂಗ್ರೆಸ್ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

ಗುರುವಾರ ನಗರದ ಮೌರ್ಯ ವೃತ್ತದ ಗಾಂಧಿ ಪ್ರತಿಮೆ ಎದುರು ಜಮಾಯಿಸಿದ ಕಾಂಗ್ರೆಸ್ ಕಾರ್ಯಕರ್ತರು, ಮಹಿಳೆ ಕುರಿತು ಸಚಿವರ ವರ್ತನೆ ಸರಿಯಿಲ್ಲ. ಈ ಕೂಡಲೇ ಅವರು ರಾಜೀನಾಮೆ ನೀಡಬೇಕೆಂದು ಒತ್ತಾಯಿಸಿದರು.

ಪ್ರತಿಭಟನೆಯನ್ನುದ್ದೇಶಿಸಿ ಮಾತನಾಡಿದ ಕಾಂಗ್ರೆಸ್ ಹಿರಿಯ ಮುಖಂಡ ಎಸ್.ಮನೋಹರ್, ಮಾಧುಸ್ವಾಮಿ ಅವರು ಸರ್ವಾಧಿಕಾರಿ ಧೋರಣೆಯಿಂದ ರೈತ ಮಹಿಳೆಯನ್ನು ನಿಂದಿಸಿ ಕೆಟ್ಟ ಪದ ಬಳಸಿದ್ದಾರೆ. ತಾನೇ ಮೇಧಾವಿ ಎಂದು ಬಿಂಬಿಸಿಕೊಳ್ಳುವ ಪ್ರಯತ್ನವನ್ನು ಮಾಧುಸ್ವಾಮಿ ಮಾಡುತ್ತಿದ್ದಾರೆ. ಅವರನ್ನು ಸಚಿವ ಸಂಪುಟದಿಂದ ವಜಾಗೊಳಿಸಬೇಕು ಎಂದು ಆಗ್ರಹಿಸಿದರು.

ಬಿಜೆಪಿ ಸರಕಾರಕ್ಕೆ ಮಹಿಳೆಯರ ಬಗ್ಗೆ ಗೌರವ ಇಲ್ಲ ಎಂದು ಅವರು ದೂರಿದರು. ಈ ಸಂದರ್ಭದಲ್ಲಿ ಕಾಂಗ್ರೆಸ್ ಕಾರ್ಯಕರ್ತರು ಮಾಧುಸ್ವಾಮಿ ಅವರ ಭಾವಚಿತ್ರಕ್ಕೆ ಬೆಂಕಿ ಹಾಕಿ ಆಕ್ರೋಶ ಹೊರ ಹಾಕಿದರು. ಕಾಂಗ್ರೆಸ್ ಮುಖಂಡ ಜನಾರ್ದನ್ ಸೇರಿದಂತೆ ಪ್ರಮುಖರು ಉಪಸ್ಥಿತರಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)