varthabharthiಕರ್ನಾಟಕ

ಮೇ 22ರಂದು ಎಸ್ಸೆಸ್ಸೆಫ್ ರಾಜ್ಯ ಮಟ್ಟದ ತರ್ತೀಲ್ ಸಮಾರೋಪ

ವಾರ್ತಾ ಭಾರತಿ : 21 May, 2020

ಬೆಂಗಳೂರು, ಮೇ 21: ರಾಜ್ಯ ಸುನ್ನಿ ಸ್ಟೂಡೆಂಟ್ಸ್ ಫೆಡರೇಶನ್ ಕ್ಯಾಂಪಸ್ ಹಾಗೂ ವಿಸ್ಡಂ ವಿಭಾಗವು ಕ್ಯಾಂಪಸ್ ವಿದ್ಯಾರ್ಥಿಗಳಿಗೆ ಈ ಲಾಕ್‍ಡೌನ್ ಸಮಯದಲ್ಲಿ ಆನ್ ಲೈನ್ ಮೂಲಕ ನಡೆಸಿದ ರಾಜ್ಯ ಮಟ್ಟದ ತರ್ತೀಲ್ ಸ್ಪರ್ಧೆಗಳ ಸಮಾರೋಪ ಸಮಾರಂಭವು ಎಸ್ಸೆಸ್ಸೆಫ್ ರಾಜ್ಯಾಧ್ಯಕ್ಷ ಸಯ್ಯಿದ್ ಸಿಟಿಎಂ ಉಮ್ಮರ್ ಅಸ್ಸಖಾಫ್ ತಂಙಳ್ ಮದನಿರವರ ಅಧ್ಯಕ್ಷತೆಯಲ್ಲಿ ಮೇ 22 ಶುಕ್ರವಾರ ಬೆಳಗ್ಗೆ 10.30ಕ್ಕೆ ಆನ್‍ಲೈನ್‍ನಲ್ಲಿ ನಡೆಯಲಿದೆ.

ಎಸ್.ವೈ.ಎಸ್ ರಾಜ್ಯ ಪ್ರಧಾನ ಕಾರ್ಯದರ್ಶಿ ಡಾ.ಅಬ್ದುರ್ರಶೀದ್ ಝೈನಿ ಸಖಾಫಿ ಕಾಮಿಲ್ ಕಾರ್ಯಕ್ರಮವನ್ನು ಉದ್ಘಾಟಿಸಲಿದ್ದು, ಹಝ್ರತ್ ಡಾ.ಮುಹಮ್ಮದ್ ಫಾಝಿಲ್ ರಝ್ವಿ ಕಾವಲ್ಕಟ್ಟೆ ದುಆಗೆ ನೇತೃತ್ವ ನೀಡಲಿದ್ದಾರೆ. ಎಸ್ಸೆಸ್ಸೆಫ್ ರಾಷ್ಟ್ರೀಯ ಅಧ್ಯಕ್ಷ ಶೌಕತ್ ನಈಮಿ ಬುಖಾರಿ ಅಭಿನಂದನಾ ಭಾಷಣ ಮಾಡಿ, ತರ್ತೀಲ್ ರಾಜ್ಯ ಮಟ್ಟದ ವಿಜೇತರನ್ನು ಘೋಷಣೆ ಮಾಡಲಿದ್ದಾರೆ.

ಸುನ್ನಿ ಕೋ ಆರ್ಡಿನೇಶನ್ ಮುಖ್ಯಸ್ಥ ಎಸ್.ಪಿ.ಹಂಝ ಸಖಾಫಿ ಬಂಟ್ವಾಳ, ಪ್ರಧಾನ ಕಾರ್ಯದರ್ಶಿ ಪಿ.ಪಿ.ಮುಹಮ್ಮದ್  ಸಖಾಪಿ, ಎಸ್.ವೈ.ಎಸ್ ವೆಲ್ಫೇರ್ ರಾಜ್ಯ ಮುಖ್ಯಸ್ಥ ಜಿ.ಎಂ.ಮುಹಮ್ಮದ್ ಕಾಮಿಲ್  ಸಖಾಫಿ,  ಇಶಾರ ಪಾಕ್ಷಿಕದ ಪ್ರಧಾನ ಸಂಪಾದಕ ಕೆ.ಎಂ.ಅಬೂಬಕ್ಕರ್ ಸಿದ್ದೀಕ್ ಮೋಂಟುಗೋಳಿ, ಎಸ್ಸೆಸ್ಸೆಫ್ ರಾಜ್ಯ ಪ್ರಧಾನ ಕಾರ್ಯದರ್ಶಿ ಯಾಕೂಬ್ ಮಾಸ್ಟರ್, ಕೋಶಾಧಿಕಾರಿ ರವೂಫ್ ಖಾನ್, ಉಪಾಧ್ಯಕ್ಷ ಹಝ್ರತ್ ಗುಲಾಮುದ್ದೀನ್ ನೂರಿ, ಎಸ್ಸೆಸ್ಸೆಫ್ ರಾಜ್ಯ ನಿಕಟ ಪೂರ್ವ ಪ್ರಧಾನ ಕಾರ್ಯದರ್ಶಿ ಇಲ್ಯಾಸ್ ನಾವುಂದ, ರಾಜ್ಯ ಕಾರ್ಯದರ್ಶಿಗಳಾದ ಹಾಫಿಳ್ ಯಾಕೂಬ್ ಸಅದಿ ನಾವೂರು, ಕೆ.ಎಂ.ಮುಸ್ತಫಾ ನಈಮಿ ಹಾವೇರಿ, ಸಿರಾಜುದ್ದೀನ್ ಸಖಾಫಿ ಕನ್ಯಾನ, ಅಶ್ರಫ್ ರಝಾ ಅಂಜದಿ, ಹುಸೈನ್ ಸಅದಿ ಹೊಸ್ಮಾರ್, ನವಾಝ್ ಭಟ್ಕಳ ಮೊದಲಾದವರು ಅಭಿನಂದನಾ ಭಾಷಣ ಮಾಡಲಿದ್ದಾರೆ ಎಂದು ಎಸ್ಸೆಸ್ಸೆಫ್ ರಾಜ್ಯ ಕಾರ್ಯದರ್ಶಿ ಇಸ್ಮಾಯಿಲ್ ಮಾಸ್ಟರ್ ಮೊಂಟೆಪದವು ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)