ರಾಜ್ಯದಲ್ಲಿ ಇಂದು 105 ಮಂದಿಗೆ ಕೊರೋನ ಪಾಸಿಟಿವ್: ಸೋಂಕಿತರ ಸಂಖ್ಯೆ 1,710ಕ್ಕೆ ಏರಿಕೆ
ಬೆಂಗಳೂರು, ಮೇ 18: ರಾಜ್ಯದಲ್ಲಿ ಗುರುವಾರ ಸಂಜೆ 5 ಗಂಟೆಯಿಂದ ಶುಕ್ರವಾರ ಮಧ್ಯಾಹ್ನ 12ಯ ಅವಧಿಯಲ್ಲಿ 105 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಟನೆ ತಿಳಿಸಿದೆ.
ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 1710 ಕ್ಕೆ ಏರಿಕೆಯಾಗಿದ್ದು, ಅದರಲ್ಲಿ 588 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದ 1080 ಮಂದಿಯನ್ನು ಆಯಾ ಜಿಲ್ಲಾ ನಿಗದಿತ ಆಸ್ಪತ್ರೆಗಳಲ್ಲಿ ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ.
ಇಂದು ಚಿಕ್ಕಬಳ್ಳಾಪುರ 50, ಬೆಂಗಳೂರು ಗ್ರಾಮಾಂತರ 9, ತುಮಕೂರು 8, ಧಾರವಾಡ 2, ಮಂಡ್ಯ 3, ಚಿಕ್ಕಮಗಳೂರು 5, ದಾವಣಗೆರೆ 3, ಬೀದರ್ 6, ಹಾವೇರಿ 3, ಉತ್ತರ ಕನ್ನಡ 1, ದಕ್ಷಿಣ ಕನ್ನಡ 1, ಹಾಸನದಲ್ಲಿ 14 ಮಂದಿಗೆ ಸೋಂಕು ವರದಿಯಾಗಿವೆ ಎಂದು ಆರೋಗ್ಯ ಇಲಾಖೆ ತಿಳಿಸಿದೆ.
Next Story