ಮನೆಯಲ್ಲಿ ಗ್ಯಾಸ್ ಸಿಲಿಂಡರ್ ಸ್ಫೋಟ: ಓರ್ವ ಸಾವು, ಮೂವರಿಗೆ ಗಂಭೀರ ಗಾಯ
ಕಲಬುರಗಿ, ಮೇ.22: ಸೇಡಂ ಪಟ್ಟಣದ ಮೋಮಿನಪುರಾ ಬಡಾವಣೆಯಲ್ಲಿ ಸಿಲಿಂಡರ್ ಸ್ಫೋಟಗೊಂಡು ಓರ್ವ ವ್ಯಕ್ತಿ ಮೃತಪಟ್ಟು, ಮೂವರಿಗೆ ಗಂಭೀರ ಗಾಯಗಳಾಗಿರುವ ಘಟನೆ ಇಂದು ಬೆಳಗ್ಗಿನ ಜಾವ ನಡೆದಿದೆ.
ರಾಜು ತಾಯತ್ (48) ಘಟನೆಯಲ್ಲಿ ಮೃತಪಟ್ಟ ವ್ಯಕ್ತಿಯಾಗಿದ್ದು, ಅವರ ಕುಟುಂಬದ ಮೂವರು ಸದಸ್ಯರು ಗಂಭೀರ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಕಲಬುರಗಿ ಜಿಲ್ಲಾ ಯುನೈಟೆಡ್ ಆಸ್ಪತ್ರೆಗೆ ದಾಖಲಿಸಿಲಾಗಿದೆ. ಸಿಲಿಂಡರ್ ಸ್ಫೋಟದ ರಭಸಕ್ಕೆ ಮನೆಯಲ್ಲಿದ್ದ ವಸ್ತುಗಳೆಲ್ಲಾ ಚೆಲ್ಲಾಪಿಲ್ಲಿಯಾಗಿವೆ.
ಘಟನಾ ಸ್ಥಳಕ್ಕೆ ಆಗಮಿಸಿದ ಸೇಡಂ ಪೊಲೀಸ್ ಠಾಣೆಯ ಕ್ರೈಂ ಪಿ.ಎಸ್.ಐ ಅಯ್ಯಪ್ಪ, ಪೊಲೀಸ್ ಸಿಬ್ಬಂದಿ ಸಿದ್ದು, ಅಲ್ಲಾಹಬಕಶ, ಮಲ್ಲಕಪ್ಪ, ಜೈಪಾಲ್ ಹಾಗೂ ಅಗ್ನಿ ಶಾಮಕ ದಳದ ಸಿಬ್ಬಂದಿ ಪರಿಶೀಲನೆ ನಡೆಸಿ, ಪ್ರಕರಣ ದಾಖಲಿಸಿಕೊಂಡು ತನಿಖೆ ಕೈಗೊಂಡಿದ್ದಾರೆ.
Next Story