varthabharthi



ಕರಾವಳಿ

ದ.ಕ.ಜಿಲ್ಲೆಯಲ್ಲಿ ಜೂ.1ರಿಂದ ಮೀನುಗಾರಿಕೆಗೆ ನಿಷೇಧ

ವಾರ್ತಾ ಭಾರತಿ : 22 May, 2020

ಮಂಗಳೂರು, ಮೇ 22: ಕರ್ನಾಟಕ ಕರಾವಳಿ ಮೀನುಗಾರಿಕೆ (ನಿಯಂತ್ರಣ) ಕಾಯ್ದೆ 1986ರ ಅನ್ವಯ ರಾಜ್ಯ ಸರಕಾರದ ಅಧಿಸೂಚನೆಯಂತೆ ದ.ಕ.ಜಿಲ್ಲೆಯ ಕರಾವಳಿಯಲ್ಲಿ ಯಾವುದೇ ಬಲೆಗಳನ್ನು ಸಾಧನಗಳನ್ನು ಉಪಯೋಗಿಸಿ ಎಲ್ಲಾ ಯಾಂತ್ರೀಕೃತ ದೋಣಿಗಳ ಹಾಗೂ 10 ಅಶ್ವಶಕ್ತಿ ಸಾಮರ್ಥ್ಯಕ್ಕಿಂತ ಮೇಲ್ಪಟ್ಟ ಇನ್‌ಬೋರ್ಡ್ ಅಥವಾ ಔಟ್‌ಬೋರ್ಡ್ ಯಂತ್ರಗಳನ್ನು ಅಳವಡಿಸಿರುವ ಸಾಂಪ್ರದಾಯಿಕ ದೋಣಿಗಳ ಮುಖಾಂತರ ಕೈಗೊಳ್ಳುವ ಮೀನುಗಾರಿಕೆ ಚಟುವಟಿಕೆಯನ್ನು ಜೂನ್ 1ರಿಂದ ಜುಲೈ 31ರವರೆಗೆ (ಉಭಯ ದಿನಗಳು ಸೇರಿ ಒಟ್ಟು 61 ದಿನಗಳ) ನಿಷೇಧವನ್ನು ಹೇರಿ ದ.ಕ.ಜಿಲ್ಲಾಧಿಕಾರಿ ಆದೇಶ ಹೊರಡಿಸಿದ್ದಾರೆ.

ದೋಣಿಯನ್ನು ಸಾಗಿಸುವ ಉದ್ದೇಶಕ್ಕಾಗಿಯೇ 10 ಅಶ್ವಶಕ್ತಿಯವರೆಗಿನ ಸಾಮರ್ಥ್ಯದ ಮೋಟಾರೀಕೃತ ಇಂಜಿನ್ ಹಾಗೂ ಸಾಂಪ್ರದಾಯಿಕ/ನಾಡದೋಣಿಗಳು ಕರಾವಳಿ ಮೀನುಗಾರಿಕೆಯನ್ನು ಕೈಗೊಳ್ಳಲು ಅನುಮತಿಸಿದೆ.

ಮೀನುಗಾರಿಕೆ ನಿಷೇಧಿಸಿದ್ದನ್ನು ಉಲ್ಲಂಘಿಸಿ ಮೀನುಗಾರಿಕೆ ನಡೆಸಿದರೆ ಕರ್ನಾಟಕ ಕಡಲ ಮೀನುಗಾರಿಕೆ ಕಾಯ್ದೆ-1986ರಲ್ಲಿ ವಿಧಿಸಲಾಗಿರುವ ದಂಡನೆಗಳಿಗೆ ಹೊಣೆಯಾಗುವುದಲ್ಲದೆ 1 ವರ್ಷದ ಅವಧಿಗೆ ಡೀಸೆಲ್ ಮೇಲಿನ ಸಹಾಯಧನ ಪಡೆಯಲು ಅನರ್ಹರಾಗುತ್ತಾರೆ. ಕರಾವಳಿ ಪ್ರದೇಶದ ಎಲ್ಲಾ ಮೀನುಗಾರರು ಈ ಆದೇಶವನ್ನು ಪಾಲಿಸುವಂತೆ ಮೀನುಗಾರಿಕಾ ಇಲಾಖೆಯ ಉಪನಿರ್ದೇಶಕರ ಪ್ರಕಟನೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)