varthabharthiಕರ್ನಾಟಕ

ಡಾ.ಚೆನ್ನವೀರ ಕಣವಿ ಅವರ ಪತ್ನಿ ಹಿರಿಯ ಸಾಹಿತಿ ಶಾಂತಾದೇವಿ ಕಣವಿ ನಿಧನ

ವಾರ್ತಾ ಭಾರತಿ : 22 May, 2020

ಧಾರವಾಡ, ಮೇ 22: ಹಿರಿಯ ಕವಿ ಡಾ.ಚೆನ್ನವೀರ ಕಣವಿ ಅವರ ಪತ್ನಿ, ಲೇಖಕಿ ಶಾಂತಾದೇವಿ ಕಣವಿ(87) ಅವರು ಬೆಳಗಾವಿಯಲ್ಲಿ ಶುಕ್ರವಾರ ಸಂಜೆ ನಿಧನರಾಗಿದ್ದಾರೆ.

ಉಸಿರಾಟದ ತೊಂದರೆಯಿಂದ ಬಳಲುತ್ತಿದ್ದ ಇವರನ್ನು ಚಿಕಿತ್ಸೆಗಾಗಿ ಬೆಳಗಾವಿಯ ಕೆಎಲ್‍ಇ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಆದರೆ, ಶುಕ್ರವಾರ ಸಂಜೆ ಚಿಕಿತ್ಸೆ ಫಲಕಾರಿಯಾಗದೇ ಕೊನೆಯುಸಿರೆಳೆದಿದ್ದಾರೆ. ಇವರಿಗೆ ಕವಿ ಕಣವಿ, ಪುತ್ರಿ, ನಾಲ್ವರು ಪುತ್ರರು ಇದ್ದಾರೆ.

ಶಾಂತಾದೇವಿ ಕಣವಿ ಅವರು ಕಥೆಗಳು, ಲಲಿತ ಪ್ರಬಂಧ, ಮಕ್ಕಳ ಸಾಹಿತ್ಯಗಳನ್ನು ರಚಿಸಿದ್ದಾರೆ. ಇವರ ಬಯಲು ಆಲಯ ಕಥಾಸಂಕಲನಕ್ಕೆ 1974ರಲ್ಲಿ ಕರ್ನಾಟಕ ಸಾಹಿತ್ಯ ಅಕಾಡಮಿ ಬಹುಮಾನ ದೊರೆತಿದೆ. 1987ರಲ್ಲಿ ಅಕಾಡಮಿಯ ಗೌರವ ಪ್ರಶಸ್ತಿ ದೊರೆತಿದೆ.

ಮೃತರ ಅಂತ್ಯಕ್ರಿಯೆ ಶನಿವಾರ ಧಾರವಾಡದಲ್ಲಿ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿವೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)