varthabharthi

ಕರಾವಳಿ

ಲಾಕ್ ಡೌನ್ ಅವಧಿಯ ಮೂರು ತಿಂಗಳ ವಿದ್ಯುತ್ ಬಿಲ್ ಮನ್ನಾ ಮಾಡುವಂತೆ ಡಿವೈಎಫ್ಐ ಒತ್ತಾಯ

ವಾರ್ತಾ ಭಾರತಿ : 22 May, 2020

ಉಳ್ಳಾಲ ಮೇ 22: ಲಾಕ್ ಡೌನ್ ಅವಧಿಯು ಜನಸಾಮಾನ್ಯರನ್ನೆಲ್ಲಾ ಕಷ್ಟದ ಕೂಪಕ್ಕೆ ತಳ್ಳಿದೆ. ತಮ್ಮ ದೈನಂದಿನ ಖರ್ಚಿಗಾಗಿ ದಿನದ ದುಡಿಮೆಯಲ್ಲೇ ಜೀವನ ಸಾಗಿಸುತ್ತಿದ್ದ ಕುಟುಂಬಗಳು ಇಂದು ಒಂದೊತ್ತಿನ ಊಟಕ್ಕಾಗಿ ಕೈಚಾಚುವ ಸ್ಥಿತಿ ನಿರ್ಮಾಣಗೊಂಡಿದೆ. ಇಂತಹ ಸಂಕಷ್ಟದ ಈ ಸಂದರ್ಭದಲ್ಲಿ ಲಾಕ್ ಡೌನ್ ಅವಧಿಯ ಮೂರು ತಿಂಗಳುಗಳ ಕಾಲದ ವಿದ್ಯುತ್ ಬಿಲ್ ಮನ್ನಾ ಮಾಡುವಂತೆ ಆಗ್ರಹಿಸಿ ಡಿವೈಎಫ್ಐ ಉಳ್ಳಾಲ ವಲಯ ಸಮಿತಿಯ ವತಿಯಿಂದ ಇಂದು ತೊಕ್ಕೊಟ್ಟು ಚಂಬುಗುಡ್ಡೆಯಲ್ಲಿರುವ ಮೆಸ್ಕಾಂ ಕಚೇರಿಯಲ್ಲಿ ಆಯುಕ್ತರನ್ನು ಭೇಟಿ ಮಾಡಿ ಮನವಿ ಸಲ್ಲಿಸಲಾಯಿತು.

ಮೆಸ್ಕಾಂ ಸಂಸ್ಥೆಯು ಜನಸಾಮಾನ್ಯರ ಮೂರು ತಿಂಗಳ ವಿದ್ಯುತ್ ದರ ಮನ್ನಾ ಮಾಡಬೇಕು ಹಾಗೂ ಆರು ತಿಂಗಳವರೆಗೆ ಬಿಲ್ಲು ಪಾವತಿಸಲು ಬಲವಂತಪಡಿಸದೆ, ಸಮಯಾವಕಾಶ ನೀಡಬೇಕೆಂದು ಡಿವೈಎಫ್ಐ ಉಳ್ಳಾಲ ವಲಯ ಸಮಿತಿಯ ಪರವಾಗಿ ಒತ್ತಾಯಿಸಲಾಯಿತು.

ನಿಯೋಗದಲ್ಲಿ ಡಿವೈಎಫ್ಐ ಉಳ್ಳಾಲ ವಲಯ ಅಧ್ಯಕ್ಷ ಅಶ್ರಫ್ ಕೆಸಿ ರೋಡ್, ಕಾರ್ಯದರ್ಶಿ ಸುನಿಲ್ ತೇವುಲ, ಜಿಲ್ಲಾ ನಾಯಕ ನಿತಿನ್ ಕುತ್ತಾರ್ , ವಲಯ ಉಪಾಧ್ಯಕ್ಷ ರಝಾಕ್ ಮೊಂಟೆಪದವು, ಸಹ ಕಾರ್ಯದರ್ಶಿ ಅಷ್ಫಾಕ್ ಅಳೇಕಲ ಉಪಸ್ಥಿತರಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)