varthabharthi



ಕರ್ನಾಟಕ

25 ಡಿವೈಎಸ್ಪಿ, 24 ಪೊಲೀಸ್ ಇನ್ಸ್ ಪೆಕ್ಟರ್ ಗಳ ವರ್ಗಾವಣೆ

ವಾರ್ತಾ ಭಾರತಿ : 22 May, 2020

ಬೆಂಗಳೂರು, ಮೇ 22: ಪೊಲೀಸ್ ಇಲಾಖೆಯ 25 ಡಿವೈಎಸ್‍ಪಿ ಹಾಗೂ 24 ಪೊಲೀಸ್ ಇನ್ಸ್ ಪೆಕ್ಟರ್(ಸಿವಿಲ್)ಗಳನ್ನು ವರ್ಗಾವಣೆಗೊಳಿಸಿ ಪೊಲೀಸ್ ಇಲಾಖೆ ಶುಕ್ರವಾರ ಆದೇಶ ಹೊರಡಿಸಿದೆ.

ಬೆಂಗಳೂರು, ಉತ್ತರ ಕನ್ನಡ, ರಾಯಚೂರು, ಬಳ್ಳಾರಿ, ಹಾವೇರಿ, ಬೆಳಗಾವಿ ಸೇರಿದಂತೆ ರಾಜ್ಯದ ವಿವಿಧ ಜಿಲ್ಲೆಗಳ ಠಾಣೆಗಳಿಗೆ ಇನ್‍ಸ್ಪೆಕ್ಟರ್ ಗಳನ್ನು ವರ್ಗಾವಣೆ ಮಾಡಿ, ತಕ್ಷಣವೇ ಕರ್ತವ್ಯಕ್ಕೆ ವರದಿ ಮಾಡಿಕೊಳ್ಳಬೇಕೆಂದು ಡಿಜಿ ಐಜಿಪಿಯವರ ನಿರ್ದೇಶನದ ಮೇರೆಗೆ ಡೈರೆಕ್ಟರ್ ಜನರಲ್ ಮತ್ತು ಇನ್‍ಸ್ಪೆಕ್ಟರ್ ಜನರಲ್ ಪೊಲೀಸ್ ಡಾ.ಎಂ.ಎ.ಸಲೀಂ ಅವರು ಆದೇಶ ಹೊರಡಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)