ಮಂಗಳೂರು: ಕೊರೋನ ಮುಕ್ತರಾದ ಐವರು ಆಸ್ಪತ್ರೆಯಿಂದ ಬಿಡುಗಡೆ
ಮಂಗಳೂರು, ಮೇ 23: ಕೋವಿಡ್-19 ಚಿಕಿತ್ಸಾ ಆಸ್ಪತ್ರೆಯಾಗಿರುವ ವೆನ್ಲಾಕ್ ಜಿಲ್ಲಾಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ಐವರು ಕೊರೋನ ಸೋಂಕಿತರು ಗುಣಮುಖರಾಗಿ ಶನಿವಾರ ಆಸ್ಪತ್ರೆಯಿಂದ ಬಿಡುಗಡೆಗೊಂಡಿದ್ದಾರೆ.
ಸೋಂಕುಮುಕ್ತರಾಗಿರುವ ಐವರನ್ನು ಇಂದು ಪೂರ್ವಾಹ್ನ 11 ಗಂಟೆ ಸುಮಾರಿಗೆ ಆಸ್ಪತ್ರೆಯಿಂದ ಡಿಸ್ಚಾರ್ಜ್ ಮಾಡಲಾಯಿತು. ಈ ಪೈಕಿ ಒಬ್ಬರು ದೃಷ್ಟಿ ಕಳೆದುಕೊಂಡಿರುವ ಹಿರಿಯ ನಾಗರಿಕರೂ ಸೇರಿದ್ದಾರೆ. ಇವರನ್ನು ವೆನ್ಲಾಕ್ನ ಆಯುಷ್ ಬ್ಲಾಕ್ ಮುಂಭಾಗದಲ್ಲಿ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಬೀಳ್ಕೊಟ್ಟರು.
Next Story