varthabharthi


ಕರಾವಳಿ

ಕಾಸರಗೋಡು: ಅಣೆಕಟ್ಟು ನೀರಿನಲ್ಲಿ ಮುಳುಗಿ ವ್ಯಕ್ತಿ ಸಾವು

ವಾರ್ತಾ ಭಾರತಿ : 25 May, 2020

ಸಾಂದರ್ಭಿಕ ಚಿತ್ರ

ಕಾಸರಗೋಡು, ಮೇ.25: ಅಣೆಕಟ್ಟಿನ ನೀರಿನಲ್ಲಿ ಮುಳುಗಿ ವ್ಯಕ್ತಿಯೊರ್ವರು ಮೃತಪಟ್ಟ ಘಟನೆ ಪೆರ್ಲ ಸಮೀಪದ ಅಡ್ಕಸ್ಥಳದಲ್ಲಿ ನಡೆದಿದೆ.

ಮೃತಪಟ್ಟವರನ್ನು ಕಾಟುಕುಕ್ಕೆ ಮೊಗರುವಿನ ಸುರೇಶ್ (33) ಎಂದು ಗುರುತಿಸಲಾಗಿದೆ. ಕೂಲಿ ಕಾರ್ಮಿಕರಾಗಿದ್ದ ಸುರೇಶ್, ಆದಿತ್ಯವಾರ ಅಡ್ಕಸ್ಥಳ ಹೊಳೆಯಲ್ಲಿ ಸ್ನಾನಕ್ಕೆ ತೆರಳಿದ್ದು, ಮರಳದಿರುವುದರಿಂದ ಮನೆಯವರು ಶೋಧ ನಡೆಸಿದ್ದಾರೆ. ಬಳಿಕ ಬದಿಯಡ್ಕ ಠಾಣಾ ಪೊಲೀಸರಿಗೆ ದೂರು ನೀಡಲಾಯಿತು. 

ಪೊಲೀಸರು, ಅಗ್ನಿಶಾಮಕ ದಳದ ಸಿಬ್ಬಂದಿಗಳು ಶೋಧ ನಡೆಸಿದಾಗ ಸುರೇಶ್ ಅಣೆಕಟ್ಟಿನ ನೀರಿನಲ್ಲಿ ಮುಳುಗಿ ಮೃತಪಟ್ಟ ವಿಚಾರ ಬೆಳಕಿಗೆ ಬಂದಿದೆ. 

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಕಾಸರಗೋಡು ಜನರಲ್ ಆಸ್ಪತ್ರೆಗೆ ಕೊಂಡೊಯ್ಯಲಾಗಿದ್ದು, ಮರಣೋತ್ತರ ಪರೀಕ್ಷೆ ಬಳಿಕ ಮೃತದೇಹವನ್ನು ಸಂಬಂಧಿಕರಿಗೆ ಬಿಟ್ಟುಕೊಡಲಾಗುವುದು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)