ದಿಲ್ಲಿ-ಲುಧಿಯಾನ ವಿಮಾನದಲ್ಲಿದ್ದ ಏರ್ ಇಂಡಿಯಾ ಸಿಬ್ಬಂದಿಗೆ ಕೊರೋನ ಸೋಂಕು
ಲುಧಿಯಾನ: ದಿಲ್ಲಿಯಿಂದ ಲುಧಿಯಾನಕ್ಕೆ ಹೊರಟಿದ್ದ ಏರ್ ಇಂಡಿಯಾ ವಿಮಾನದ ಸಿಬ್ಬಂದಿಯೊಬ್ಬರಲ್ಲಿ ಕೊರೋನ ವೈರಸ್ ಸೋಂಕು ಇರುವುದು ದೃಢಪಟ್ಟಿದೆ. ಈ ವಿಮಾನದಲ್ಲಿ ಸುಮಾರು 11 ಮಂದಿ ಪ್ರಯಾಣಿಸಿದ್ದರು.
ಉಳಿದ ಎಲ್ಲಾ ಪ್ರಯಾಣಿಕರ ತಪಾಸಣೆ ನಡೆಸಲಾಗಿದ್ದು, ವರದಿ ನೆಗೆಟಿವ್ ಬಂದಿದೆ.
ಕೊರೋನ ವೈರಸ್ ಹಿನ್ನೆಲೆಯಲ್ಲಿ ಸ್ಥಗಿತಗೊಂಡಿದ್ದ ದೇಶಿಯ ವಿಮಾನಯಾನ ಸೇವೆ ಮತ್ತೆ ಆರಂಭಗೊಂಡಿದ್ದು, ಸೋಮವಾರ 116 ಜನರ ಸ್ಯಾಂಪಲ್ ಪಡೆದುಕೊಳ್ಳಲಾಗಿತ್ತು. ಇದರಲ್ಲಿ ಏರ್ ಇಂಡಿಯಾ ಉದ್ಯೋಗಿಯ ಫಲಿತಾಂಶ ಪಾಸಿಟಿವ್ ಬಂದಿದೆ ಎಂದು ವೈದ್ಯರೊಬ್ಬರು ಮಾಹಿತಿ ನೀಡಿದ್ದಾರೆ.
ಸೋಂಕು ಪೀಡಿತ ವ್ಯಕ್ತಿ 50 ವರ್ಷ ವಯಸ್ಸಿನವರಾಗಿದ್ದು, ಅವರನ್ನು ಐಸೊಲೇಶನ್ ಸೆಂಟರ್ ಗೆ ಕಳುಹಿಸಲಾಗಿದೆ.
Next Story