ರಾಜ್ಯದಲ್ಲಿ ಇಂದು 75 ಮಂದಿಗೆ ಕೊರೋನ ಪಾಸಿಟಿವ್; ಸೋಂಕಿತರ ಸಂಖ್ಯೆ 2493ಕ್ಕೆ ಏರಿಕೆ
ದ.ಕ. ಜಿಲ್ಲೆಯಲ್ಲಿ 6, ಉಡುಪಿಯಲ್ಲಿ 27 ಮಂದಿಯಲ್ಲಿ ಸೋಂಕು ದೃಢ
ಬೆಂಗಳೂರು : ರಾಜ್ಯದಲ್ಲಿ ಬುಧವಾರ ಸಂಜೆ 5 ಗಂಟೆಯಿಂದ ಗುರುವಾರ ಮಧ್ಯಾಹ್ನ 12ರ ಅವಧಿಯಲ್ಲಿ 75 ಹೊಸ ಕೋವಿಡ್-19 ಪ್ರಕರಣಗಳು ದೃಢಪಟ್ಟಿವೆ ಎಂದು ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಇಲಾಖೆಯ ಪ್ರಕಟನೆ ತಿಳಿಸಿದೆ.
ರಾಜ್ಯದಲ್ಲಿ ಒಟ್ಟಾರೆ ಸೋಂಕಿತರ ಸಂಖ್ಯೆ 2493 ಕ್ಕೆ ಏರಿಕೆಯಾಗಿದ್ದು, ಅದರಲ್ಲಿ 809 ಜನರು ಗುಣಮುಖರಾಗಿ ಆಸ್ಪತ್ರೆಯಿಂದ ಬಿಡುಗಡೆಯಾಗಿದ್ದಾರೆ. ಉಳಿದ 1635 ಮಂದಿಯನ್ನು ಆಯಾ ಜಿಲ್ಲಾ ನಿಗದಿತ ಆಸ್ಪತ್ರೆಗಳಲ್ಲಿ ಪ್ರತ್ಯೇಕವಾಗಿರಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಕೋವಿಡ್-19 ಸೋಂಕಿನಿಂದ ಮೃತ ಪಟ್ಟವರ ಒಟ್ಟು ಸಂಖ್ಯೆ 47ಕ್ಕೆ ಏರಿದೆ.
ಇಂದು ಬೆಂಗಳೂರು ನಗರ, ವಿಜಯಪುರ, ಕಲಬುರಗಿ, ರಾಯಚೂರು, ದಕ್ಷಿಣ ಕನ್ನಡ, ಉಡುಪಿ, ಹಾಸನ, ಚಿಕ್ಕಮಗಳೂರು, ಚಿತ್ರದುರ್ಗ, ಯಾದಗಿರಿಯಲ್ಲಿ ಸೋಂಕು ಪತ್ತೆಯಾಗಿರುವುದಾಗಿ ಆರೋಗ್ಯ ಇಲಾಖೆ ತಿಳಿಸಿದೆ.
Next Story