varthabharthiರಾಷ್ಟ್ರೀಯ

ಸುವರ್ಣ ಅಧ್ಯಾಯದಲ್ಲಿ ತೊಡಗಿಸಿಕೊಂಡಿದ್ದಕ್ಕಾಗಿ ಅಭಿನಂದನೆ: ಪ್ರಧಾನಿಗೆ ಯಶವಂತ ಸಿನ್ಹಾ ವ್ಯಂಗ್ಯ

ವಾರ್ತಾ ಭಾರತಿ : 1 Jun, 2020

ಹೊಸದಿಲ್ಲಿ, ಜೂ.1: ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದಲ್ಲಿ ಸುವರ್ಣ ಅಧ್ಯಾಯ ತಂದಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು ಎಂದು ಮಾಜಿ ಕೇಂದ್ರ ಸಚಿವರಾದ ಯಶವಂತ ಸಿನ್ಹಾ ಟ್ವಿಟರ್‌ನಲ್ಲಿ ವ್ಯಂಗ್ಯವಾಡಿದರು.

  "ಭಾರತೀಯ ಪ್ರಜಾಪ್ರಭುತ್ವ ಇತಿಹಾಸದಲ್ಲಿ ಸುವರ್ಣ ಅಧ್ಯಾಯ ಬರೆಯಲು ತನ್ನನ್ನು ತೊಡಗಿಸಿಕೊಂಡಿರುವ ಪ್ರಧಾನಮಂತ್ರಿ ನರೇಂದ್ರ ಮೋದಿ ಅವರಿಗೆ ಅಭಿನಂದನೆಗಳು. ಮುಂದಿನ ವರ್ಷ ಇನ್ನಷ್ಟು ಉತ್ತಮವಾಗುವ ಭರವಸೆ ಮೂಡಿಸಿದ್ದು, ಕೋವಿಡ್-19 ಪ್ರಕರಣದಲ್ಲಿ ಭಾರತ ಅಗ್ರ ಸ್ಥಾನಕ್ಕೇರಲಿದೆ ಹಾಗೂ ಆರ್ಥಿಕತೆ ಸಂಪೂರ್ಣ ಕುಸಿಯಲಿದೆ'' ಎಂದು 2018ರಲ್ಲಿ ಆಡಳಿತಾರೂಢ ಬಿಜೆಪಿಯನ್ನು ತ್ಯಜಿಸಿದ್ದ ಸಿನ್ಹಾ ಹೇಳಿದ್ದಾರೆ.

ಪ್ರಧಾನಮಂತ್ರಿ ನರೇಂದ್ರ ಮೋದಿ ತನ್ನ ಎರಡನೇ ಅವಧಿಯ ಮೊದಲ ವರ್ಷದ ಸಂಭ್ರಮದಲ್ಲಿ ದೇಶದ ಜನರಿಗೆ ಬರೆದ ಪತ್ರದಲ್ಲಿ ಬಳಸಿರುವ ಮೊದಲ ಪದಗಳನ್ನು ಸಿನ್ಹಾ ತನ್ನ ಟ್ವಿಟರ್‌ನಲ್ಲಿ ಬಳಸಿಕೊಂಡಿದ್ದಾರೆ. ಕಳೆದ ವರ್ಷ ಇದೇ ದಿನದಂದು ಭಾರತೀಯ ಪ್ರಜಾಪ್ರಭುತ್ವದ ಇತಿಹಾಸದ ಸುವರ್ಣ ಯುಗವನ್ನು ಆರಂಭಿಸಲಾಗಿತ್ತು. ಹಲವು ದಶಕಗಳ ಬಳಿಕ ದೇಶದ ಜನತೆ ಪೂರ್ಣಾವಧಿ ಪೂರೈಸಿದ್ದ ಸರಕಾರಕ್ಕೆ ಸಂಪೂರ್ಣ ಬಹುಮತ ನೀಡಿದ್ದರು ಎಂದು ಪ್ರಧಾನಿ ಪತ್ರದಲ್ಲಿ ಬರೆದಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)