varthabharthi


ರಾಷ್ಟ್ರೀಯ

ಕೆಮಿಕಲ್ ಕಾರ್ಖಾನೆಯಲ್ಲಿ ಭಾರೀ ಸ್ಫೋಟ: 40 ಕಾರ್ಮಿಕರಿಗೆ ಗಾಯ

ವಾರ್ತಾ ಭಾರತಿ : 3 Jun, 2020

ಹೊಸದಿಲ್ಲಿ: ಕೆಮಿಕಲ್ ಕಾರ್ಖಾನೆಯೊಂದರಲ್ಲಿ ಸಂಭವಿಸಿದ ಭಾರೀ ಸ್ಫೋಟದಲ್ಲಿ 40 ಕಾರ್ಮಿಕರು ಗಾಯಗೊಂಡಿರುವ ಘಟನೆ ಗುಜರಾತ್ ನ ದಹೇಜ್ ನಲ್ಲಿ ನಡೆದಿದೆ.

ಸುಮಾರು 10 ಅಗ್ನಿಶಾಮಕ ದಳ ವಾಹನಗಳು ಸ್ಥಳಕ್ಕೆ ಧಾವಿಸಿದ್ದು, ರಕ್ಷಣಾ ಕಾರ್ಯದಲ್ಲಿ ನಿರತವಾಗಿವೆ. ಕಾರ್ಖಾನೆಯ ರಾಸಾಯನಿಕ ವಿಷಕಾರಿಯಾಗಿರುವುದರಿಂದ ಸ್ಥಳೀಯರನ್ನು ಬೇರೆಡೆಗೆ ಸ್ಥಳಾಂತರಿಸಲಾಗಿದೆ.

“ಬಾಯ್ಲರ್ ಸ್ಫೋಟಗೊಂಡ ಪರಿಣಾಮ ಸುಮಾರು 35ರಿಂದ 40 ಕಾರ್ಮಿಕರಿಗೆ ಗಾಯಗಳಾಗಿವೆ. ಎಲ್ಲಾ ಗಾಯಾಳುಗಳನ್ನು ಭರೂಚ್ ನ ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ಅಧಿಕಾರಿಯೊಬ್ಬರು ಮಾಹಿತಿ ನೀಡಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)