varthabharthi


ಸಿನಿಮಾ

‘ಅಯ್ಯಪ್ಪನುಂ ಕೋಶಿಯುಂ’ ಚಿತ್ರದ ನಿರ್ದೇಶಕ ಸಚಿ ನಿಧನ

ವಾರ್ತಾ ಭಾರತಿ : 18 Jun, 2020

ಹೊಸದಿಲ್ಲಿ: ಮಲಯಾಳಂನ ಪ್ರಸಿದ್ಧ ಚಿತ್ರ ನಿರ್ದೇಶಕ ಕೆ.ಆರ್. ಸಚಿ ಇಂದು ತ್ರಿಶೂರಿನ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದ ವೇಳೆ ಅವರು ಹೃದಯಾಘಾತಕ್ಕೊಳಗಾಗಿದ್ದರು. ನಂತರ ಜೂನ್ 16ರಂದು ಅವರನ್ನು ಜುಬಿಲಿ ಮಿಶನ್ ಆಸ್ಪತ್ರೆಗೆ ದಾಖಲಿಸಲಾಗಿದ್ದು, ವೆಂಟಿಲೇಟರ್ ನಲ್ಲಿ ಇರಿಸಲಾಗಿತ್ತು. ಆದರೆ ಚಿಕಿತ್ಸೆ ಫಲಕಾರಿಯಾಗದೆ ಅವರು ಇಂದು ಕೊನೆಯುಸಿರೆಳೆದಿದ್ದಾರೆ.

2020ರಲ್ಲಿ ಅವರು ನಿರ್ದೇಶಿಸಿದ ‘ಅಯ್ಯಪ್ಪನುಂ ಕೋಶಿಯುಂ’ ಚಿತ್ರ ಸೂಪರ್ ಹಿಟ್ ಆಗಿತ್ತು. ಹಲವು ಸಿನೆಮಾಗಳಿಗೆ ಚಿತ್ರಕಥೆ ಬರೆದಿರುವ ಸಚಿ, 2015ರಲ್ಲಿ ಅನಾರ್ಕಲಿ ಚಿತ್ರವನ್ನು ನಿರ್ದೇಶಿಸಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)