varthabharthiಅಂತಾರಾಷ್ಟ್ರೀಯ

ಕರಾಚಿಯಲ್ಲಿ ಸ್ಟಾಕ್ ಎಕ್ಸ್ ಚೇಂಜ್ ಮೇಲೆ ಉಗ್ರರ ದಾಳಿ: 6 ಮಂದಿ ಮೃತ್ಯು

ವಾರ್ತಾ ಭಾರತಿ : 29 Jun, 2020

ಕರಾಚಿ: ಇಲ್ಲಿನ ಸ್ಟಾಕ್ ಎಕ್ಸ್ ಚೇಂಜ್ ಮೇಲೆ ನಡೆದ ಉಗ್ರರ ದಾಳಿಯಲ್ಲಿ 6 ಮಂದಿ ಮೃತಪಟ್ಟಿದ್ದು, ನಾಲ್ವರು ಉಗ್ರರನ್ನು ಹತ್ಯೆಗೈಯಲಾಗಿದೆ.

ಭಾರೀ ಭದ್ರತೆಯಿರುವ ಕಟ್ಟಡದೊಳಕ್ಕೆ ನುಗ್ಗಿದ ಭಯೋತ್ಪಾದಕರು ಈ ದಾಳಿಯನ್ನು ನಡೆಸಿದ್ದಾರೆ. ಗ್ರೆನೇಡ್ ಮತ್ತು ಗನ್ ಗಳನ್ನು ಬಳಸಿ ಅವರು ದಾಳಿ ನಡೆಸಿದ್ದಾರೆ. ನಾಲ್ವರು ಭಯೋತ್ಪಾದಕರನ್ನು ಹತ್ಯೆಗೈಯಲಾಗಿದೆ ಎಂದು ಪಾಕಿಸ್ತಾನದ ಅಧಿಕಾರಿಯೊಬ್ಬರು ತಿಳಿಸಿದ್ದಾಗಿ ವರದಿಯಾಗಿದೆ.

ದಾಳಿಯಲ್ಲಿ ನಾಲ್ವರು ಭದ್ರತಾ ಸಿಬ್ಬಂದಿ, ಒಬ್ಬ ಪೊಲೀಸ್ ಸಿಬ್ಬಂದಿ ಮತ್ತೊಬ್ಬ ದಾರಿಹೋಕ ಮೃತಪಟ್ಟಿದ್ದಾರೆ ಎನ್ನುವ ಮಾಹಿತಿ ಲಭಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)