varthabharthi



ಬೆಂಗಳೂರು

ಕೋವಿಡ್ ಪರೀಕ್ಷೆ ಮಾಡಿಸಬೇಕು ಎಂದ ವೈದ್ಯನ ಮೇಲೆ ಹಲ್ಲೆ; ಪ್ರಕರಣ ದಾಖಲು

ವಾರ್ತಾ ಭಾರತಿ : 29 Jun, 2020

ಸಾಂದರ್ಭಿಕ ಚಿತ್ರ

ಬೆಂಗಳೂರು, ಜೂ.29: ಕೋವಿಡ್-19 ಪರೀಕ್ಷೆ ಮಾಡಿಸಬೇಕೆಂದು ಸೂಚಿಸಿದ ವೈದ್ಯರೊಬ್ಬರ ಮೇಲೆ ಹಲ್ಲೆ ನಡೆಸಿರುವ ಆರೋಪ ಕೇಳಿಬಂದಿದ್ದು, ಈ ಸಂಬಂಧ ಕೋಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಮೊಕದ್ದಮೆ ದಾಖಲಾಗಿದೆ.

ಇಲ್ಲಿನ ಸಹಕಾರ ನಗರ ಬಳಿಯಿರುವ ನಾರಾಯಣ ಕ್ಲಿನಿಕ್‍ನ ಜಗನ್ನಾಥ್ ಎಂಬವರು ಹಲ್ಲೆಗೊಳಗಾದ ವೈದ್ಯ ಎಂದು ತಿಳಿದುಬಂದಿದೆ.

ರಕ್ತದೊತ್ತಡ ಪರಿಹಾರ ಸಂಬಂಧ ರೋಗಿಯೊಬ್ಬರು ಆಸ್ಪತ್ರೆಗೆ ಬಂದಿದ್ದು, ಈ ಸಂದರ್ಭದಲ್ಲಿ ಕೋವಿಡ್-19 ಪರೀಕ್ಷೆಗೆ ಒಳಪಡಬೇಕೆಂದು ವೈದ್ಯರು ಸೂಚಿಸಿದ್ದಾರೆ. ಆದರೆ, ಇದಕ್ಕೆ ವಿರೋಧ ವ್ಯಕ್ತಪಡಿಸಿ ರೋಗಿಯೊಂದಿಗೆ ಬಂದಿದ್ದ ಕೆಲವರು ವೈದ್ಯರ ಹಲ್ಲೆ ನಡೆಸಿದ್ದಾರೆ ಎಂದು ಹೇಳಲಾಗುತ್ತಿದೆ.

ಘಟನೆಯಲ್ಲಿ ಆಂಬ್ಯುಲೆನ್ಸ್ ಚಾಲಕನಿಗೆ ಗಾಯಗಳಾಗಿದ್ದು, ಈ ಸಂಬಂಧ ಕೋಡಿಗೆಹಳ್ಳಿ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಿಸಿ, ತನಿಖೆ ಕೈಗೊಳ್ಳಲಾಗಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)