varthabharthiರಾಷ್ಟ್ರೀಯ

ಜಮ್ಮು-ಕಾಶ್ಮೀರ: ಇಬ್ಬರು ಉಗ್ರರು ಹತ

ವಾರ್ತಾ ಭಾರತಿ : 30 Jun, 2020

ಅನಂತನಾಗ್(ಜಮ್ಮು-ಕಾಶ್ಮೀರ),ಜೂ.30: ದಕ್ಷಿಣ ಕಾಶ್ಮೀರದ ಅನಂತನಾಗ್ ಜಿಲ್ಲೆಯಲ್ಲಿ ಮಂಗಳವಾರ ಬೆಳಗ್ಗೆ ಭದ್ರತಾ ಪಡೆಗಳು ಇಬ್ಬರನ್ನು ಉಗ್ರರನ್ನು ಸುತ್ತುವರಿದು ಹತ್ಯೆಗೈದಿದ್ದಾರೆ. ಈ ವೇಳೆ ಓರ್ವ ಉಗ್ರ ಪರಾರಿಯಾಗಲು ಯಶಸ್ವಿಯಾಗಿದ್ದಾನೆ.

 ಪರಾರಿಯಾಗಿರುವ ಮೂರನೇ ಉಗ್ರ ಕಳೆದ ವಾರ ನಡೆದ ಉಗ್ರರ ದಾಳಿಯ ವೇಳೆ ಪಾಲ್ಗೊಂಡಿದ್ದ ಎಂದು ಶಂಕಿಸಲಾಗಿದೆ. ಉಗ್ರರ ದಾಳಿಯಲ್ಲಿ  ಬಾಲಕ ಹಾಗೂ ಸಿಆರ್‌ಪಿಎಫ್ ಯೋಧರೊಬ್ಬರು ಮೃತಪಟ್ಟಿದ್ದರು.

ಇಂದು ಬೆಳಗ್ಗಿನ ಜಾವ ಗುಂಡಿನ ಚಕಮಕಿ ಆರಂಭವಾಗಿತ್ತು. ಗುಪ್ತಚರ ಮಾಹಿತಿಯ ಮೇರೆಗೆ ಭದ್ರತಾ ಪಡೆಗಳು ಉಗ್ರರನ್ನು ಪತ್ತೆ ಹಚ್ಚಲು ಕಾರ್ಯಾಚರಣೆ ನಡೆಸಿದ್ದರು.

 ಎನ್‌ಕೌಂಟರ್‌ನಲ್ಲಿ ಇಬ್ಬರು ಉಗ್ರರು ಹತರಾಗಿದ್ದು, ಓರ್ವ ಉಗ್ರ ಪರಾರಿಯಾಗಿದ್ದಾನೆ. ಹಣ್ಣಿನ ತೋಟದ ಪ್ರದೇಶದಲ್ಲಿ ಈ ಘಟನೆ ನಡೆದಿದೆ ಎಂದು ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)