varthabharthiರಾಷ್ಟ್ರೀಯ

ಇಂದು ಸಂಜೆ 4 ಗಂಟೆಗೆ ದೇಶವನ್ನುದ್ದೇಶಿಸಿ ಪ್ರಧಾನಿ ಮೋದಿ ಭಾಷಣ

ವಾರ್ತಾ ಭಾರತಿ : 30 Jun, 2020

ಹೊಸದಿಲ್ಲಿ, ಜೂ.30: ಪ್ರಧಾನಮಂತ್ರಿ ನರೇಂದ್ರ ಮೋದಿ ಮಂಗಳವಾರ ಸಂಜೆ 4:00 ಗಂಟೆಗೆ ದೇಶವನ್ನು ಉದ್ದೇಶಿಸಿ ಭಾಷಣ ಮಾಡಲಿದ್ದಾರೆ ಎಂದು ಪ್ರಧಾನಮಂತ್ರಿ ಕಚೇರಿ ಟ್ವೀಟ್ ಮಾಡಿದೆ.

ಲಡಾಖ್ ಕಣಿವೆಯಲ್ಲಿ ಭಾರತ ಹಾಗೂ ಚೀನಾದ ನಡುವೆ ನಡೆಯುತ್ತಿರುವ ಸಂಘರ್ಷ ಹಾಗೂ ಕೊರೋನ ವೈರಸ್ ಪ್ರಕರಣ ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಹೊತ್ತಿನಲ್ಲಿ ಪ್ರಧಾನಿ ದೇಶವನ್ನು ಉದ್ದೇಶಿಸಿ ಮಾತನಾಡಲು ನಿರ್ಧರಿಸಿದ್ದಾರೆ.

ಪ್ರಧಾನಿ ಮೋದಿ ರವಿವಾರ ತಿಂಗಳ ರೇಡಿಯೊ ಕಾರ್ಯಕ್ರಮ 'ಮನ್ ಕೀ ಬಾತ್‌'ನಲ್ಲಿ ಮಾತನಾಡುತ್ತಾ, ಭಾರತ ಲಡಾಖ್‌ನಲ್ಲಿ ಚೀನಾಕ್ಕೆ ತಕ್ಕ ಉತ್ತರ ನೀಡಿದೆ ಎಂದರಲ್ಲದೆ ಈ ತಿಂಗಳಾರಂಭದಲ್ಲಿ ಲಡಾಖ್ ಕಣಿವೆಯಲ್ಲಿ ಚೀನಾ ಸೈನಿಕರೊಂದಿಗೆ ಹೋರಾಡಿದ ದೇಶದ ಯೋಧರ ಸಾಹಸವನ್ನು ಶ್ಲಾಘಿಸಿದ್ದರು. ವ್ಯಾಪಾರಿಗಳು ಹಾಗೂ ದೇಶದ ಜನತೆ ಚೀನಾದ ಉತ್ಪನ್ನಗಳನ್ನು ಬಹಿಷ್ಕರಿಸಬೇಕೆಂದು ಕರೆ ನೀಡಿದ್ದರು.

ಕೇಂದ್ರ ಸರಕಾರ ರವಿವಾರ ಮಹತ್ವದ ಬೆಳವಣಿಗೆಯಲ್ಲಿ ಚೀನಾದ 59 ಮೊಬೈಲ್ ಆ್ಯಪ್‌ಗಳನ್ನು ನಿಷೇಧಿಸುವ ನಿರ್ಧಾರ ಕೈಗೊಂಡಿತ್ತು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)