varthabharthi


ಕರ್ನಾಟಕ

ಮೈಸೂರು: ಕೊರೋನ ವೈರಸ್ ಗೆ ಮತ್ತೊಂದು ಬಲಿ

ವಾರ್ತಾ ಭಾರತಿ : 2 Jul, 2020

ಮೈಸೂರು: ಕೊರೋನ ವೈರಸ್ ಗೆ ಮೈಸೂರಿನಲ್ಲಿ ಮತ್ತೊಂದು ಬಲಿಯಾಗಿದ್ದು, ಜಿಲ್ಲೆಯ ಟಿ.ನರಸೀಪುರ ತಾಲ್ಲೂಕಿನ ಕೇತುಪುರ ಗ್ರಾಮದ ವೃದ್ಧೆ ಮೃತಪಟ್ಟಿದ್ದಾರೆ ಎಂದು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ.

ಕೇತುಪುರ ಗ್ರಾಮದ 63 ವರ್ಷದ  ವೃದ್ಧೆ ಬುಧವಾರ ತಡ ರಾತ್ರಿ ನಗರದ ನೂತನ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಉಸಿರಾಟದ ತೊಂದರೆಯಿಂದ ಬಳಲುತಿದ್ದ ಅವರು ಟಿ.ನರಸೀಪುರ ಸರ್ಕಾರಿ ಆಸ್ಪತ್ರಗೆ ದಾಖಲಾಗಿದ್ದರು. ಅವರಿಗೆ ಕೊರೋನ ಸೋಂಕು ದೃಢಪಟ್ಟಿತ್ತು. ನಂತರ ಅವರಿಗೆ ಮೈಸೂರಿನ ಕೋವಿಡ್-19 ಜಿಲ್ಲಾಸ್ಪತ್ರೆಯ ಐಸೂಲೇಷನ್ ನಲ್ಲಿ ಚಿಕಿತ್ಸೆ ನೀಡಲಾಗುತಿತ್ತು ವೈದ್ಯಾಧಿಕಾರಿಗಳು ತಿಳಿಸಿದ್ದಾರೆ. 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)