varthabharthi


ರಾಷ್ಟ್ರೀಯ

ಪ್ರಿಯಾಂಕಾ ಗಾಂಧಿ ಉ.ಪ್ರದೇಶ ಸಿಎಂ ಅಭ್ಯರ್ಥಿಯೆಂದು ಘೋಷಿಸಿ: ಕಾರ್ತಿ ಚಿದಂಬರಂ ಒತ್ತಾಯ

ವಾರ್ತಾ ಭಾರತಿ : 2 Jul, 2020

ಹೊಸದಿಲ್ಲಿ, ಜು.2: ಕಾಂಗ್ರೆಸ್‌ನ ಪ್ರಧಾನ ಕಾರ್ಯದರ್ಶಿ ಪ್ರಿಯಾಂಕಾ ಗಾಂಧಿ ವಾಧ್ರಾರನ್ನು ಉತ್ತರಪ್ರದೇಶದ ಮುಖ್ಯಮಂತ್ರಿ ಅಭ್ಯರ್ಥಿಯೆಂದು ಘೋಷಿಸುವಂತೆ ಪಕ್ಷದ ಸಂಸದ ಕಾರ್ತಿ ಚಿದಂಬರಂ ಒತ್ತಾಯಿಸಿದ್ದಾರೆ.

ಪಕ್ಷಕ್ಕೆ ರಾಷ್ಟ್ರಮಟ್ಟದಲ್ಲಿ ಪುನಶ್ಚೇತನ ನೀಡುವ ದಾರಿಯ ಮೂಲ ಉತ್ತರಪ್ರದೇಶವಾಗಿದೆ. ಈ ಬಗ್ಗೆ ಪಕ್ಷದ ಹಿರಿಯ ಮುಖಂಡರು ಗಮನ ಹರಿಸಬೇಕು. ಪ್ರಿಯಾಂಕಾ ಗಾಂಧಿ ಮುಖ್ಯವಾಗಿ ಉತ್ತರಪ್ರದೇಶದಲ್ಲಿ ನೆಲೆಸಿ ಪಕ್ಷವನ್ನು ಮುನ್ನಡೆಸುವ ಕಾಲ ಈಗ ಬಂದಿದೆ ಎಂದು ಕಾರ್ತಿ ಚಿದಂಬರಂ ಟ್ವೀಟ್ ಮಾಡಿದ್ದಾರೆ. ಪ್ರಿಯಾಂಕಾ ಗಾಂಧಿ ಉತ್ತರಪ್ರದೇಶ ಸರಕಾರದ ವಿರುದ್ಧ ನಿರಂತರ ವಾಗ್ದಾಳಿ ನಡೆಸುತ್ತಿದ್ದಾರೆ. ಕಳೆದ ತಿಂಗಳು ವಲಸೆ ಕಾರ್ಮಿಕರನ್ನು ಅವರ ಊರಿಗೆ ಮರಳಿಸುವ ಬಸ್ಸುಗಳ ವ್ಯವಸ್ಥೆ ಮಾಡುವ ವಿಷಯದಲ್ಲಿ ಉತ್ತರ ಪ್ರದೇಶ ಸರಕಾರ ಮತ್ತು ಕಾಂಗ್ರೆಸ್ ಮಧ್ಯೆ ತಿಕ್ಕಾಟ ನಡೆದಿತ್ತು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)