varthabharthi


ಕರಾವಳಿ

ತಲಪಾಡಿ : ಕಾಂಗ್ರೆಸ್ ಸಮಿತಿಯಿಂದ ಪ್ರತಿಜ್ಞಾ ಕಾರ್ಯಕ್ರಮದ ನೇರ ಪ್ರಸಾರ

ವಾರ್ತಾ ಭಾರತಿ : 2 Jul, 2020

ಉಳ್ಳಾಲ: ತಲಪಾಡಿ ವಲಯ ಕಾಂಗ್ರೆಸ್ ಸಮಿತಿ ವತಿಯಿಂದ ಡಿ.ಕೆ.ಶಿವಕುಮಾರ್ ಅವರ ಕೆಪಿಸಿಸಿ ಅಧ್ಯಕ್ಷ ಪದಗ್ರಹಣ ಪ್ರತಿಜ್ಞಾ ಕಾರ್ಯಕ್ರಮದ ನೇರ ಪ್ರಸಾರ ತಲಪಾಡಿ ಯಲ್ಲಿ ಗುರುವಾರ ನಡೆಯಿತು.

ತಾ.ಪಂ. ಸದಸ್ಯೆ ಸುರೇಖಾ ಚಂದ್ರ ಹಾಸ್  ಕಾರ್ಯಕ್ರಮ ಉದ್ಘಾಟಿಸಿದರು. ತಲಪಾಡಿ ವಲಯ ಕಾಂಗ್ರೆಸ್ ಅಧ್ಯಕ್ಷ ಗಣೇಶ್ ಶೆಟ್ಟಿ ಕಾರ್ಯಕ್ರಮ ದ ಅಧ್ಯಕ್ಷತೆ ವಹಿಸಿದ್ದರು. ತಾ.ಪಂ.ಸದಸ್ಯ ಸಿದ್ದೀಕ್ ತಲಪಾಡಿ ಪ್ರಾಸ್ತಾವಿಕವಾಗಿ ಮಾತನಾಡಿದರು.

ತಲಪಾಡಿ ಗ್ರಾ.ಪಂ.ಮಾಜಿ ಅಧ್ಯಕ್ಷ ಖಾದರ್ ಟಿ.ಸದಸ್ಯ ಹಸೈನಾರ್, ಇಬ್ರಾಹಿಂ ಟಿ, ವಿನು ತಲಪಾಡಿ, ಮಾಜಿ ಸದಸ್ಯ ಇಬ್ರಾಹಿಂ ತಲಪಾಡಿ, ಶಬೀರ್ ತಲಪಾಡಿ, ಅಬ್ಬಾಸ್ ಪಂಜಳ, ಶಮೀರ್ ತಲಪಾಡಿ, ಹಾಸಿಂ ಕೆಸಿರೋಡ್ ಮೊದಲಾದವರು ಉಪಸ್ಥಿತರಿದ್ದರು.

ಶಬೀರ್ ತಲಪಾಡಿ ಸ್ವಾಗತಿಸಿ, ಕಾರ್ಯಕ್ರಮ ನಿರೂಪಿಸಿದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)