ಕೊರೋನ ಸೋಂಕಿತರಿಂದ ಭರ್ತಿಯಾದ ಹುಬ್ಬಳ್ಳಿ ಕಿಮ್ಸ್ ಆಸ್ಪತ್ರೆ
ಹುಬ್ಬಳ್ಳಿ, ಜು.6: ಹುಬ್ಬಳ್ಳಿ ನಗರದಲ್ಲಿರುವ ಕಿಮ್ಸ್ ಆಸ್ಪತ್ರೆ ಕೊರೋನ ಸೋಂಕಿತರಿಂದ ತುಂಬಿ ಹೋಗಿದ್ದು, ಹೊಸದಾಗಿ ಸೋಂಕು ತಗಲಿದ ಜನರು ಖಾಸಗಿ ಆಸ್ಪತ್ರೆಯತ್ತ ಮುಖ ಮಾಡುತ್ತಿದ್ದಾರೆ.
ಧಾರವಾಡ ಜಿಲ್ಲೆಯಲ್ಲಿ ಕೊರೋನ ಪ್ರಕರಣಗಳು ಹೆಚ್ಚಾಗುತ್ತಿರುವ ಹಿನ್ನೆಲೆ ಕಿಮ್ಸ್ ಆಸ್ಪತ್ರೆ ಫುಲ್ ಆಗಿದೆ. ಹೀಗಾಗಿ, ಖಾಸಗಿ ಆಸ್ಪತ್ರೆಗಳಲ್ಲಿ ಕೊರೋನ ಚಿಕಿತ್ಸೆ ಪ್ರಾರಂಭಗೊಳ್ಳಲಿದೆ. ಈಗಾಗಲೇ ಸರಕಾರ 22 ಖಾಸಗಿ ಆಸ್ಪತ್ರೆಗಳನ್ನು ಕೊರೋನ ಚಿಕಿತ್ಸೆಗೆ ಆಯ್ಕೆ ಮಾಡಿ ಪಟ್ಟಿ ಬಿಡುಗಡೆಗೊಳಿಸಿದೆ.
ಹೊಸದಾಗಿ ಸೋಂಕು ದೃಢಪಟ್ಟಿರುವವರಿಗೆ ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದ್ದು, ವೆಂಟಿಲೇಟರ್ ಹಾಗೂ ಐಸಿಯು ಅವಶ್ಯಕತೆಯಿದ್ದ ರೋಗಿಗಳಿಗೆ ಮಾತ್ರ ಕಿಮ್ಸ್ ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತದೆ.
Next Story