varthabharthi


ಕರಾವಳಿ

ವಾಹನ ತಪಾಸಣೆ ವೇಳೆ ನಿಲ್ಲಿಸದೆ ಪರಾರಿಯಾದ ಕಾರು ಅಪಘಾತ: 10 ಕಿಲೋ ಗಾಂಜಾ ಪತ್ತೆ, ಓರ್ವನ ಬಂಧನ

ವಾರ್ತಾ ಭಾರತಿ : 7 Jul, 2020

ಮಂಜೇಶ್ವರ, ಜು.7: ಪೊಲೀಸ್ ತಪಾಸಣೆ ವೇಳೆ ನಿಲ್ಲಿಸದೆ ಪರಾರಿಯಾದ ಕಾರೊಂದು ಅಪಘಾತಕ್ಕೀಡಾದ ಘಟನೆ ನಡೆದಿದೆ. ಈ ವೇಳೆ ಕಾರಿನಲ್ಲಿ 10ಕೆ.ಜಿ. ಗಾಂಜಾ ಪತ್ತೆಯಾಗಿದ್ದು, ಆರೋಪಿಯೋರ್ವನನ್ನು ಬಂಧಿಸಿದ್ದಾರೆ.

ಮಂಗಳವಾರ ಮಧ್ಯಾಹ್ನ ಮಂಜೇಶ್ವರ ಪೊಲೀಸರು ಮಂಜೇಶ್ವರ ಠಾಣಾ ವ್ಯಾಪ್ತಿಯ ಮೊರತ್ತನೆ ಸಮೀಪದ ಬತ್ತಿಪ್ಪದವಿನಲ್ಲಿ ವಾಹನ ತಪಾಸಣೆ ನಡೆಸುತ್ತಿದ್ದರು. ಈ ವೇಳೆ ಇದೇ ದಾರಿಯಾಗಿ ಬಂದ ಕಾರೊಂದು ಪೊಲೀಸರು ನಿಲ್ಲಿಸಲು ಸೂಚಿಸಿದರೂ ನಿಲ್ಲಿಸದೆ ಪರಾರಿಯಾಗಲು ಯತ್ನಿಸಿದ್ದು ಇದರಂತೆ ಕಾರನ್ನು ಪೊಲೀಸರು ಬೆನ್ನಟ್ಟಿದ್ದಾರೆ. ಈ ವೇಳೆ ಕಾರು ಚಾಲಕನ ನಿಯಂತ್ರಣ ತಪ್ಪಿ ಅಪಘಾತಕ್ಕೀಡಾಗಿದೆ.

ಕಾರನ್ನು ತಪಾಸಣೆ ನಡೆಸಿದಾಗ ಗೋಣಿ ಚೀಲದಲ್ಲಿ ತುಂಬಿಸಿದ್ದ 10 ಕಿಲೋ ಗಾಂಜಾ ಪತ್ತೆಯಾಗಿದ್ದು, ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಬುಧವಾರ ಬೆಳಗ್ಗೆ ನ್ಯಾಯಾಲಯಕ್ಕೆ ಹಾಜರುಪಡಿಸುವುದಾಗಿ ಪೊಲೀಸರು ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)