ವಿಧಾನ ಪರಿಷತ್ ಸದಸ್ಯರೊಬ್ಬರಿಗೆ ಕೊರೋನ ಪಾಸಿಟಿವ್
ಬೆಂಗಳೂರು, ಜು.8: ವಿಧಾನ ಪರಿಷತ್ ಸದಸ್ಯರೊಬ್ಬರಿಗೆ ಕೊರೋನ ವೈರಸ್ ಸೋಂಕು ತಗುಲಿರುವುದು ದೃಢಪಟ್ಟಿದ್ದು, ಅವರು ನಗರದ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದಾರೆ.
ಚಿಕ್ಕಮಗಳೂರು ಮೂಲದ ಜೆಡಿಎಸ್ ಪಕ್ಷದ ವಿಧಾನ ಪರಿಷತ್ ಸದಸ್ಯರೊಬ್ಬರಲ್ಲಿ ಕೊರೋನ ಸೋಂಕು ಕಾಣಿಸಿಕೊಂಡಿದೆ. ಈ ಹಿನ್ನೆಲೆಯಲ್ಲಿ ಅವರು ಬೆಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆಯುತ್ತಿದ್ದಾರೆ ಎಂದು ತಿಳಿದುಬಂದಿದೆ.
Next Story