varthabharthi


ಕರಾವಳಿ

ಕಾಸರಗೋಡಿಗೆ ಕರ್ನಾಟಕದಿಂದ ಹಣ್ಣು, ತರಕಾರಿ ತರುವ ವಾಹನಗಳಿಗೆ ಪಾಸ್ ಕಡ್ಡಾಯ

ವಾರ್ತಾ ಭಾರತಿ : 8 Jul, 2020

ಸಾಂದರ್ಭಿಕ ಚಿತ್ರ

ಕಾಸರಗೋಡು, ಜು.8: ಕರ್ನಾಟಕದಿಂದ ಕಾಸರಗೋಡು ಜಿಲ್ಲೆಗೆ ತರಕಾರಿ, ಹಣ್ಣುಹಂಪಲುಗಳನ್ನು ತರಲು ವಾಹನಗಳಿಗೆ ಪಾಸ್  ಕಡ್ಡಾಯಗೊಳಿಸಲಾಗಿದೆ.

ಜಿಲ್ಲಾಧಿಕಾರಿ ಡಾ.ಡಿ.ಸಜಿತ್ ಬಾಬು ಅಧ್ಯಕ್ಷತೆಯಲ್ಲಿ ನಡೆದ ಜಿಲ್ಲಾ ಕೊರೋನ ನಿಯಂತ್ರಣ ಸಮಿತಿಯ ಸಭೆ ಈ ತೀರ್ಮಾನ ತೆಗೆದುಕೊಂಡಿದೆ.

ಪ್ರಾದೇಶಿಕ ಸಾರಿಗೆ ಅಧಿಕಾರಿ (ಆರ್.ಟಿ.ಒ) ಪಾಸ್ ಮಂಜೂರುಗೊಳಿಸಲಿದೆ. ವಾಹನ ಚಾಲಕ ಹಾಗೂ ಇತರ ಸಿಬ್ಬಂದಿ ಏಳು ದಿನಗಳಿಗೊಮ್ಮೆ ಸಮೀಪದ ಪ್ರಾಥಮಿಕ ಆರೋಗ್ಯ ಕೇಂದ್ರದಲ್ಲಿ ತಪಾಸಣೆಗೆ ಒಳಗಾಗಿ ವೈದ್ಯಕೀಯ ಪ್ರಮಾಣ ಪತ್ರ ಪಡೆಯಬೇಕು ಎಂದು ತಿಳಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)