ಮಂಗಳೂರು ಮನಪಾ ಕಾರ್ಪೊರೇಟರ್, ಸಿಬ್ಬಂದಿಗೆ ಕೊರೋನ ಪಾಸಿಟಿವ್
ಮಂಗಳೂರು, ಜು.8: ಮಂಗಳೂರು ಮಹಾನಗರ ಪಾಲಿಕೆಯ ಸದಸ್ಯರೊಬ್ಬರಿಗೆ ಹಾಗೂ ಪಾಲಿಕೆಯ ಆರೋಗ್ಯ ಇಲಾಖೆಯಲ್ಲಿ ಕೆಲಸ ಮಾಡುತ್ತಿರುವ ಸಿಬ್ಬಂದಿಯೊಬ್ಬರಿಗೆ ಕೊರೋನ ಸೋಂಕು ದೃಢಪಟ್ಟಿದೆ.
ಪಾಲಿಕೆಯ ಸದಸ್ಯರೊಬ್ಬರಿಗೆ ಕೊರೋನ ಸೋಂಕು ದೃಢಪಟ್ಟಿದ್ದು, ಅವರು ಕೆಲ ದಿನಗಳ ಹಿಂದೆ ಕುಂಜತ್ತಬೈಲ್ ಪ್ರಾಥಮಿಕ ಆರೋಗ್ಯ ಕೇಂದ್ರದ ಸಭೆಯಲ್ಲಿ ಭಾಗಿಯಾಗಿದ್ದರೆನ್ನಲಾಗಿದೆ. ಈ ಸಭೆಗೆ ಆಗಮಿಸಿದ್ದ ಓರ್ವರಿಗೆ ಕೊರೋನ ಸೋಂಕು ದೃಢಪಟ್ಟಿತ್ತು. ಹೀಗಾಗಿ ಕಳೆದ ಏಳು ದಿನಗಳಿಂದ ಪಾಲಿಕೆ ಸದಸ್ಯೆ ಕ್ವಾರಂಟೈನ್ನಲ್ಲಿದ್ದು, ಇಂದು ಬಂದ ವರದಿಯಲ್ಲಿ ಅವರಿಗೆ ಸೋಂಕು ದೃಢಪಟ್ಟಿದೆ.
ಇದಲ್ಲದೇ ಪಾಲಿಕೆಯ ಸಿಬ್ಬಂದಿಯೊಬ್ಬರಿಗೂ ಕೊರೋನ ಸೋಂಕು ದೃಢಪಟ್ಟಿರುವ ಹಿನ್ನೆಲೆಯಲ್ಲಿ ಮುಂಜಾಗೃತಾ ಕ್ರಮವಾಗಿ ಪಾಲಿಕೆ ಕಚೇರಿಗೆ ಮತ್ತೆ ಸಾರ್ವಜನಿಕ ಪ್ರವೇಶವನ್ನು ನಿರ್ಬಂಧಿಸುವ ಸಾಧ್ಯತೆ ಇದೆ.
Next Story