ಗೃಹ ಕಚೇರಿ ಸಿಬ್ಬಂದಿಗೆ ಕೋವಿಡ್ ದೃಢ: ಮನೆಯಲ್ಲೇ ಕರ್ತವ್ಯ ನಿರ್ವಹಿಸಲಿರುವ ಸಿಎಂ ಯಡಿಯೂರಪ್ಪ
ಬೆಂಗಳೂರು, ಜು.10: ಗೃಹ ಕಚೇರಿ ಕೃಷ್ಣಾದಲ್ಲಿ ಕೆಲ ಸಿಬ್ಬಂದಿಗೆ ಕೋವಿಡ್ ಪಾಸಿಟಿವ್ ಬಂದಿರುವ ಕಾರಣ ಇಂದಿನಿಂದ ಕೆಲ ದಿನಗಳ ಕಾಲ ಮನೆಯಿಂದಲೇ ನನ್ನ ಕರ್ತವ್ಯಗಳನ್ನು ನಿರ್ವಹಿಸಲಿದ್ದೇನೆ ಎಂದು ಸಿಎಂ ಯಡಿಯೂರಪ್ಪ ಅವರು ತಿಳಿಸಿದ್ದಾರೆ.
ಇಂದಿನಿಂದ ಕೆಲ ದಿನಗಳ ಕಾಲ ಮನೆಯಿಂದಲೇ ನನ್ನ ಕರ್ತವ್ಯಗಳನ್ನು ನಿರ್ವಹಿಸಲಿದ್ದೇನೆ. ವೀಡಿಯೋ ಕಾನ್ಫರೆನ್ಸ್ ಮುಖಾಂತರ ಅಗತ್ಯ ಸಲಹೆ ಸೂಚನೆಗಳನ್ನು ನೀಡಲಿದ್ದೇನೆ. ಯಾರೂ ಆತಂಕ ಪಡುವ ಅಗತ್ಯವಿಲ್ಲ, ಆರೋಗ್ಯವಾಗಿದ್ದೇನೆ. ಎಲ್ಲರೂ ಮುನ್ನೆಚ್ಚರಿಕೆಯ ಕ್ರಮಗಳು ಹಾಗೂ ಸರ್ಕಾರದ ಮಾರ್ಗಸೂಚಿಗಳನ್ನು ಪಾಲಿಸಿ. ಸುರಕ್ಷಿತ ಅಂತರ ಹಾಗು ಕಡ್ಡಾಯವಾಗಿ ಮಾಸ್ಕ್ ಧರಿಸಿ ಕೋವಿಡ್ ನಿಯಂತ್ರಣಕ್ಕೆ ಸಹಕರಿಸಿ ಎಂದು ಅವರು ಪತ್ರಿಕಾ ಪ್ರಕಟನೆಯಲ್ಲಿ ತಿಳಿಸಿದ್ದಾರೆ.
Next Story