ಸುಳ್ಯ ಖಾಸಗಿ ಆಸ್ಪತ್ರೆಯ ವೈದ್ಯಕೀಯ ವಿದ್ಯಾರ್ಥಿ ಸಹಿತ ನಾಲ್ವರಿಗೆ ಕೊರೋನ ಸೋಂಕು
ಸುಳ್ಯ, ಜು11: ಸುಳ್ಯದ ಖಾಸಗಿ ಆಸ್ಪತ್ರೆಯೊಂದರ ಓರ್ವ ವೈದ್ಯಕೀಯ ಸಿಬ್ಬಂದಿ, ಓರ್ವ ವೈದ್ಯಕೀಯ ವಿದ್ಯಾರ್ಥಿ ಮತ್ತು ಇಬ್ಬರು ರೋಗಿಗಳಲ್ಲಿ ಕೊರೋನ ವೈರಸ್ ಸೋಂಕು ಕಾಣಿಸಿಕೊಂಡಿದೆ.
ಕೋವಿಡ್-19 ಸೋಂಕು ಕಾಣಿಸಿಕೊಂಡಿರುವ ಹಿನ್ನೆಲೆಯಲ್ಲಿ ಆಸ್ಪತ್ರೆಯನ್ನು ಸ್ಯಾನಿಟೈಸ್ ಮಾಡುವ ಉದ್ದೇಶದಿಂದ ಸೀಲ್ ಡೌನ್ ಮಾಡುವ ಸಾಧ್ಯತೆ ಇದೆ. ಸುಳ್ಯದಲ್ಲಿ ಕೊರೋನ ವೈರಸ್ ಸೋಂಕು ಪ್ರಮಾಣ ಹೆಚ್ಚಳವಾಗುತ್ತಿರುವುದು ತಾಲೂಕಿನ ಜನರಲ್ಲಿ ಆತಂಕ ಮೂಡಿಸಿದೆ.
ಎರಡು ದಿನಗಳ ಹಿಂದೆ ಇಲ್ಲಿನ ಸರಕಾರಿ ಆಸ್ಪತ್ರೆಯ ವೈದ್ಯರು, ಸಿಬ್ಬಂದಿ ಸೇರಿದಂತೆ ಆರು ಮಂದಿಯಲ್ಲಿ ಸೋಂಕು ದೃಢಪಟ್ಟಿತ್ತು.
Next Story