varthabharthi


ಕರ್ನಾಟಕ

ಕೊರೋನ ಉಪಕರಣಗಳ ಖರೀದಿ: 'ಲೆಕ್ಕ ಕೊಡಿ' ಎಂದು ಹಲವು ಪ್ರಶ್ನೆಗಳನ್ನು ರಾಜ್ಯ ಸರಕಾರದ ಮುಂದಿಟ್ಟ ಸಿದ್ದರಾಮಯ್ಯ

ವಾರ್ತಾ ಭಾರತಿ : 11 Jul, 2020

ಬೆಂಗಳೂರು: ಕೊರೋನ ಉಪಕರಣಗಳ ಖರೀದಿ ಸಂಬಂಧ ರಾಜ್ಯದ ಜನತೆಗೆ ಲೆಕ್ಕ ಕೊಡಿ ಎಂದು ವಿಧಾನಸಭೆಯ ವಿರೋಧ ಪಕ್ಷದ ನಾಯಕರಾದ ಸಿದ್ದರಾಮಯ್ಯ ಅವರು ಸರ್ಕಾರವನ್ನು ಒತ್ತಾಯಿಸಿದ್ದಾರೆ.

ಈ ಕುರಿತು ಅವರು ಜನತೆಯ ಪರವಾಗಿ ಕೆಲವು ಪ್ರಶ್ನೆಗಳಿಗೆ ಸರ್ಕಾರದಿಂದ ಉತ್ತರ ಬಯಸಿದ್ದಾರೆ.

ಈ ಬಗ್ಗೆ ಸಿದ್ದರಾಮಯ್ಯ ಅವರ ಪ್ರಶ್ನೆಗಳ ವಿಡಿಯೋ ಯೂಟ್ಯೂಬ್, ಫೇಸ್‌ಬುಕ್‌, ಟ್ವಿಟರ್ ನಲ್ಲಿ ಅಪಲೋಡ್ ಆಗಿದ್ದು, 'ಲೆಕ್ಕ ಕೊಡಿ' ಹೆಸರಿನ ಆಭಿಯಾನ ಆರಂಭವಾಗಿದೆ.

ಲೆಕ್ಕ ಕೇಳುವುದು ರಾಜ್ಯದ ಜನತೆಯ ಹಕ್ಕು, ಉತ್ತರ ಕೊಡುವುದು ಸರ್ಕಾರದ ಕರ್ತವ್ಯ ಎಂದು ಸಿದ್ದರಾಮಯ್ಯ ಅವರು ಹೇಳಿದ್ದಾರೆ.

ಪ್ರಶ್ನೆಗಳು ಹೀಗಿವೆ :

# ರಾಜ್ಯದ ಜನ ಕೇಳುತ್ತಿದ್ದಾರೆ ಲೆಕ್ಕ ಕೊಡಿ.

►.ಕೊರೋನ ಸೋಂಕು ಬಂದಾಗಿನಿಂದ ಇದುವರೆಗೆ ರಾಜ್ಯ ಸರ್ಕಾರ ಖರ್ಚು ಮಾಡಿದ ಹಣ ಎಷ್ಟು?

ಕೇಂದ್ರ ಸರ್ಕಾರ ಎಷ್ಟು ನೀಡಿದೆ?

► ಯಾವ ಯಾವ ಇಲಾಖೆ ಯಾವ ಬಾಬತ್ತಿಗೆ ಎಷ್ಟು ಹಣ ಖರ್ಚು ಮಾಡಿವೆ?

► ಪಿಪಿಇ ಕಿಟ್, ಟೆಸ್ಟ್ ಕಿಟ್,ಗ್ಲೌಸ್,ಸ್ಯಾನಿಟೈಸರ್, ಥರ್ಮಲ್ ಸ್ಕ್ಯಾನರ್, ಕಿಯೋಸ್ಕ್ ಮುಂತಾದವುಗಳಿಗೆ ಮಾರುಕಟ್ಟೆ ದರ ಎಷ್ಟು? ನೀವು ಪ್ರತಿಯೊಂದನ್ನು ಯಾವ ದರಕ್ಕೆ ಖರೀದಿಸಿದ್ದೀರಿ?

► ಈವರೆಗೆ ಎಷ್ಟು ಫುಡ್ ಕಿಟ್ ಎಷ್ಟು ಫುಡ್ ಪ್ಯಾಕೆಟ್ ಕೊಟ್ಟಿದ್ದೀರಿ? ಯಾರಿಗೆ ಕೊಟ್ಟಿದ್ದೀರಿ?

ಪ್ರತಿಯೊಂದಕ್ಕೆ ಎಷ್ಟು ಹಣ ಖರ್ಚು ಮಾಡಿದ್ದೀರಿ?

ತಾಲ್ಲೂಕುವಾರು. ವಾರ್ಡ್ ವಾರು ಲೆಕ್ಕ ಕೊಡಿ.

► ವಲಸೆ ಕಾರ್ಮಿಕರಿಗೆ ಪ್ರಯಾಣದ ಸಂದರ್ಭದಲ್ಲಿ ಎಷ್ಟು ಫುಡ್ ಕಿಟ್ ಕೊಟ್ಟಿದ್ದೀರಿ?

ಏನೇನು ಕೊಟ್ಟಿದ್ದೀರಿ?

ಪ್ರತಿ ಕಿಟ್ ಗೆ ಖರ್ಚು ಮಾಡಿದ ಹಣ ಎಷ್ಟು?

►ಸಂಕಷ್ಟದಲ್ಲಿರುವ ಜನರಿಗೆ ಕೇಂದ್ರ , ರಾಜ್ಯ ಸರ್ಕಾರಗಳು ಘೋಷಿಸಿದ ಪ್ಯಾಕೇಜುಗಳು ಯಾವುವು?

ಇದುವರೆಗೆ ಯಾವ ಯಾವ ವೃತ್ತಿಯವರಿಗೆ, ಯಾವ ಯಾವ ಸಮುದಾಯಕ್ಕೆ ಎಷ್ಟು ಹಣ ಬಿಡುಗಡೆ ಮಾಡಿದ್ದೀರಿ?

►ಕೊರೋನ‌ ಸಂತ್ರಸ್ತರ ಆರೈಕೆಗೆ ಎಷ್ಟು ಹಣ ಖರ್ಚು ಮಾಡಿದ್ದೀರಿ?

ಈ ಎಲ್ಲದರ ಸಂಪೂರ್ಣ ಲೆಕ್ಕ ಕೊಡಿ ಎಂದು ಸಿದ್ದರಾಮಯ್ಯ ಅವರು ಕೇಳಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)