varthabharthi


ಕರಾವಳಿ

ದ.ಕ. ಜಿಲ್ಲೆಯಲ್ಲಿ ಕೊರೋನ ವೈರಸ್ ಗೆ ಮತ್ತೊಂದು ಬಲಿ

ವಾರ್ತಾ ಭಾರತಿ : 11 Jul, 2020

ಸಾಂದರ್ಭಿಕ ಚಿತ್ರ

ಬಂಟ್ವಾಳ, ಜು.11: ಕೋವಿಡ್-19 ಗೆ ಬಂಟ್ವಾಳ ತಾಲೂಕಿನ ಫರಂಗಿಪೇಟೆ ಸಮೀಪದ ಮಾರಿಪಳ್ಳದ 85 ವರ್ಷ ಪ್ರಾಯದ ವೃದ್ಧರೊಬ್ಬರು ಶನಿವಾರ ಮೃತಪಟ್ಟಿದ್ದಾರೆ. ಅವರು ಹಲವು ವರ್ಷಗಳಿಂದ ಅಸ್ತಮಾ ರೋಗದಿಂದ ಬಳಲುತ್ತಿದ್ದರು ಎಂದು ತಿಳಿದು ಬಂದಿದೆ.

ಇತ್ತೀಚೆಗೆ ಅವರಿಗೆ ಅಸ್ತಮಾ ಸಮಸ್ಯೆ ಹೆಚ್ಚಾದ ಕಾರಣ ಜುಲೈ 7ರಂದು ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಕೊವೀಡ್ ಪರೀಕ್ಷೆಗೆ ಕಳುಹಿಸಿದ್ದ ಅವರ ಗಂಟಲು ದ್ರವ ಮಾದರಿಯ ವರದಿ ಜುಲೈ 9ರಂದು ರಾತ್ರಿ ಬಂದಿದ್ದು ಕೊರೋನ ಪಾಸಿಟಿವ್ ಅಗಿದೆ.

ಇಂದು ಬೆಳಗ್ಗೆ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ. ಸಂಜೆಯ ವೇಳೆಗೆ ಮಾರಿಪಳ್ಳ ಜುಮಾ ಮಸೀದಿಯ ದಫನ ಭೂಮಿಯಲ್ಲಿ ಆರೋಗ್ಯ ಇಲಾಖೆಯ ಮಾರ್ಗಸೂಚಿ ಪ್ರಕಾರ ಅಂತ್ಯ ಕ್ರಿಯೆ ನಡೆಸಲಾಯಿತು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)