ಮೈಸೂರಿನಲ್ಲಿ ಕೊರೋನ ಸೋಂಕಿನಿಂದ ಇಂದು ನಾಲ್ವರು ಸಾವು; 24ಕ್ಕೇರಿದ ಸಾವಿನ ಸಂಖ್ಯೆ
ಮೈಸೂರು,ಜು.11: ಮೈಸೂರಿನಲ್ಲಿ ದಿನೇ ದಿನೇ ಕೊರೋನ ಸೋಂಕಿತರ ಸಾವಿನ ಸಂಖ್ಯೆ ಹೆಚ್ಚಳವಾಗುತಿದ್ದು, ಶನಿವಾರ ನಾಲ್ವರು ಕೊರೋನ ಸೋಂಕಿತರು ಸಾವನ್ನಪ್ಪಿದ್ದಾರೆ. ಇದುವರೆಗೆ ಸಾವನ್ನಪ್ಪಿದವರ ಸಂಖ್ಯೆ 24ಕ್ಕೆ ಏರಿದಂತಾಗಿದೆ.
ಕೊರೋನ ಸೋಂಕಿನಿಂದ ಸಾವನ್ನಪ್ಪುತ್ತಿರುವುದನ್ನು ಕಂಡು ಮೈಸೂರು ಜಿಲ್ಲೆಯ ಜನತೆ ಆತಂಕಕ್ಕೊಳಗಾಗಿದ್ದಾರೆ. ಇಂದು 55 ಮಂದಿಗೆ ಕೊರೋನ ಸೋಂಕು ದೃಢಪಟ್ಟಿದೆ. ಒಟ್ಟಿನಲ್ಲಿ ಕೊರೋನ ಸೋಂಕಿನ ಸಂಖ್ಯೆ ಹೆಚ್ಚಳವಾಗುತ್ತಿದ್ದು, ನಗರದ ನೂತನ ಕೋವಿಡ್-19 ಆಸ್ಪತ್ರೆಯಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.
Next Story