varthabharthi


ಕರ್ನಾಟಕ

ಮಡಿಕೇರಿ: ಆದೇಶ ಉಲ್ಲಂಘಿಸಿ ಪ್ರವಾಸಿಗರ ವಾಸ್ತವ್ಯ; ಹೋಂಸ್ಟೇ ಮಾಲಕರ ವಿರುದ್ಧ ಎಫ್ಐಆರ್

ವಾರ್ತಾ ಭಾರತಿ : 12 Jul, 2020

ಮಡಿಕೇರಿ, ಜು.12: ಜಿಲ್ಲಾಡಳಿತದ ಆದೇಶವನ್ನು ಉಲ್ಲಂಘಿಸಿ ಪ್ರವಾಸಿಗರ ವಾಸ್ತವ್ಯಕ್ಕೆ ಅವಕಾಶ ನೀಡಿದ ಮರಗೋಡು ಗ್ರಾಮ ಪಂಚಾಯತ್ ವ್ಯಾಪ್ತಿಯ ಹೋಂ ಸ್ಟೇ ಒಂದರ ಮಾಲಕರು ಹಾಗೂ ಪ್ರವಾಸಿಗರ ವಿರುದ್ಧ ಎಫ್ಐಆರ್ ದಾಖಲಿಸಲಾಗಿದೆ.

ಮರಗೋಡು ಗ್ರಾಮದ ಭಾರತಿ ಎಂಬವರಿಗೆ ಸೇರಿದ ಹೋಂಸ್ಟೇಯಲ್ಲಿ ಮೈಸೂರು ಮೂಲದ ಪ್ರವಾಸಿಗರು ವಾಸ್ತವ್ಯ ಹೂಡಿದ್ದರೆನ್ನಲಾಗಿದೆ. ಈ ಬಗ್ಗೆ ಮಾಹಿತಿ ದೊರೆತ ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ರಾಘವೇಂದ್ರ ಅವರು ಮಡಿಕೇರಿ ಗ್ರಾಮಾಂತರ ಠಾಣೆ ಪೊಲೀಸರಿಗೆ ದೂರು ನೀಡಿದ್ದು, ಅದರನ್ವಯ ಹೋಂಸ್ಟೇ ಮಾಲಕರು ಹಾಗೂ ಅಲ್ಲಿದ್ದ ಪ್ರವಾಸಿಗರ ವಿರುದ್ಧ ಎಫ್‍ಐಆರ್ ದಾಖಲಿಸಲಾಗಿದೆ.

ಪ್ರಸಕ್ತ ಹೋಂ ಸ್ಟೇಯನ್ನು ಮುಚ್ಚಿಸಲಾಗಿದೆ ಎಂದು ಪ್ರವಾಸೋದ್ಯಮ ಇಲಾಖೆಯ ಸಹಾಯಕ ನಿರ್ದೇಶಕ ರಾಘವೇಂದ್ರ ಅವರು ತಿಳಿಸಿದ್ದಾರೆ. 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)