varthabharthi


ಕರ್ನಾಟಕ

ಬಾಗಲಕೋಟೆ ಜಿಲ್ಲೆಯಲ್ಲಿ ಕೊರೋನಗೆ ಮತ್ತಿಬ್ಬರು ಬಲಿ: ಮೃತರ ಸಂಖ್ಯೆ 13ಕ್ಕೆ ಏರಿಕೆ

ವಾರ್ತಾ ಭಾರತಿ : 12 Jul, 2020

ಬಾಗಲಕೋಟೆ, ಜು.12: ಬಾಗಲಕೋಟೆ ಜಿಲ್ಲೆಯಲ್ಲಿ ಕೊರೋನ ವೈರಸ್ ಸೋಂಕಿನಿಂದ ರವಿವಾರ ಮತ್ತಿಬ್ಬರು ಮೃತಪಟ್ಟಿದ್ದು, ಇದರಿಂದ ಮೃತರ ಸಂಖ್ಯೆ ಹದಿಮೂರಕ್ಕೆ ಏರಿಕೆಯಾಗಿದೆ.

ಬಾಗಲಕೋಟೆ ನಗರದ ನಿವಾಸಿ 74 ವರ್ಷದ ವೃದ್ಧ ಉಸಿರಾಟದ ತೊಂದರೆ ಹಿನ್ನೆಲೆಯಲ್ಲಿ ಒಂದು ದಿನದ ಹಿಂದೆ ಕೊರೋನ ಆಸ್ಪತ್ರೆಗೆ ದಾಖಲಾಗಿದ್ದು, ರವಿವಾರ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.   

ಬಾಗಲಕೋಟೆ ತಾಲೂಕಿನ 44 ವರ್ಷದ ಯುವಕ ಮೂರು ದಿನಗಳ ಹಿಂದೆ ಖಾಸಗಿ ಆಸ್ಪತ್ರೆಗೆ ದಾಖಲಾಗಿದ್ದು, ಆರೋಗ್ಯ ಸ್ಥಿತಿ ಗಂಭೀರವಾದ ಹಿನ್ನೆಲೆ ಅವರನ್ನು ಶುಕ್ರವಾರ ಜಿಲ್ಲಾ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಈ ವೇಳೆ ಅವರಿಗೆ ಕೊರೋನ ದೃಢಪಟ್ಟಿತ್ತು. ಬೆಳಗಿನ ಜಾವ ಚಿಕಿತ್ಸೆ ಫಲಿಸದೆ ಮೃತಪಟ್ಟಿದ್ದಾರೆ.

ಇಬ್ಬರ ಮೃತದೇಹಗಳನ್ನು ಕೊರೋನ ನಿಯಮಾವಳಿ ಅನ್ವಯ ಅಂತ್ಯಕ್ರಿಯೆ ನೆರವೇರಿಸಲಾಗಿದೆ ಎಂದು ಬಾಗಲಕೋಟೆ ಡಿಎಚ್‍ಒ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)