varthabharthi


ಕರ್ನಾಟಕ

ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಬಾಬುರಾವ್ ದೇಶಮಾನೆ ಇನ್ನಿಲ್ಲ

ವಾರ್ತಾ ಭಾರತಿ : 12 Jul, 2020

ಕಲಬುರ್ಗಿ, ಜು.12: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಬಾಬುರಾವ್ ದೇಶಮಾನೆ ಅವರು ನಿಧನ ಹೊಂದಿದ್ದಾರೆ.

ಕಲಬುರಗಿ ಜಿಲ್ಲೆಯ ಜೇವರ್ಗಿ ತಾಲೂಕಿನ ಕೋಬಾಳ ಗ್ರಾಮದವರಾದ 102 ವಯಸ್ಸಿನವರಾದ ಬಾಬುರಾವ್ ಶಂಕರರಾವ್ ದೇಶಮಾನೆ ಅವರು ಚಿಕ್ಕವಯಸ್ಸಿನಲ್ಲೇ ದೇಶದ ಸ್ವಾತಂತ್ರ್ಯಕ್ಕಾಗಿ ಹೋರಾಡಿದವರು. 1950ರಲ್ಲಿ ಹೆಣ್ಣುಮಕ್ಕಳ ಶಿಕ್ಷಣಕ್ಕೆ ಒತ್ತು ನೀಡುವಂತೆ ಹೋರಾಟ ನಡೆಸಿದ ಕೀರ್ತಿ ಈ ಹಿರಿಯ ಸ್ವಾತಂತ್ರ್ಯ ಸೇನಾನಿಗೆ ಸಲ್ಲುತ್ತದೆ.

ಗಣ್ಯರ ಸಂತಾಪ: ಹಿರಿಯ ಸ್ವಾತಂತ್ರ್ಯ ಹೋರಾಟಗಾರ ಬಾಬುರಾವ್ ಶಂಕರರಾವ್ ದೇಶಮಾನೆ ನಿಧನಕ್ಕೆ ಉಪಮುಖ್ಯಮಂತ್ರಿ ಗೋವಿಂದ ಕಾರಜೋಳ ಸೇರಿದಂತೆ ಅನೇಕ ಗಣ್ಯರು, ಹೋರಾಟಗಾರರು ಕಂಬನಿ ಮಿಡಿದಿದ್ದಾರೆ.

ಬಾಬುರಾವ್ ಶಂಕರರಾವ್ ದೇಶಮಾನೆ ಅವರು ಸರಳ ಸಜ್ಜನಿಕೆಯ ವ್ಯಕ್ತಿತ್ವ ಹೊಂದಿದ್ದರು. ದೇಶಪ್ರೇಮಿಯಾಗಿದ್ದ ಅವರು ಯುವಕರಲ್ಲಿ ದೇಶಾಭಿಮಾನ ಮೂಡಿಸುವಲ್ಲಿ ಅಪಾರವಾಗಿ ಶ್ರಮಿಸಿದ್ದಾರೆ. ಓರ್ವ ಹಿರಿಯ ಜೀವಿ, ಸ್ವಾತಂತ್ರ್ಯ ಹೋರಾಟಗಾರರನ್ನು ಕಳೆದುಕೊಂಡಂತಾಗಿದೆ. ಮೃತರ ಆತ್ಮಕ್ಕೆ ಚಿರಶಾಂತಿ ಸಿಗಲಿ.

-ಗೋವಿಂದ ಕಾರಜೋಳ, ಉಪಮುಖ್ಯಮಂತ್ರಿ

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)