varthabharthi


ಕರಾವಳಿ

ದ.ಕ. ಜಿಲ್ಲೆಯಲ್ಲಿ ಲಾಕ್​ಡೌನ್ ಮಾಡುವಂತೆ ಮುಖ್ಯಮಂತ್ರಿಗೆ ಸಂಸದ ನಳಿನ್ ಕುಮಾರ್ ಮನವಿ

ವಾರ್ತಾ ಭಾರತಿ : 13 Jul, 2020

ಮಂಗಳೂರು, ಜು.13: ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಕೊರೋನ ವೈರಸ್ ಹೆಚ್ಚಾಗುತ್ತಿರುವ ಹಿನ್ನೆಲೆಯಲ್ಲಿ ಜಿಲ್ಲೆಯಲ್ಲಿ ಒಂದು ವಾರಗಳ ಕಾಲ ಲಾಕ್​ಡೌನ್ ಮಾಡುವಂತೆ ಸಂಸದ ನಳೀನ್ ಕುಮಾರ್ ಕಟೀಲು ಅವರು ಮುಖ್ಯಮಂತ್ರಿಗೆ ಮನವಿ ಮಾಡಿದ್ದಾರೆ.

ಲಾಕ್​ಡೌನ್ ಮಾಡುವುದಕ್ಕೆ ಅವಕಾಶ ಕೊಡಿ ಎಂದು ಮುಖ್ಯಮಂತ್ರಿಗೆ ಇಂದು ವೀಡಿಯೋ ಕಾನ್ಫರೆನ್ಸ್ ನಲ್ಲಿ ನಳೀನ್ ಕುಮಾರ್ ಮನವಿ ಮಾಡಿದರು. ಇದಕ್ಕೆ ಪ್ರತಿಕ್ರಿಯಿಸಿದ ಸಿಎಂ ಯಡಿಯೂರಪ್ಪ ಜಿಲ್ಲಾಡಳಿತವೇ ಸೂಕ್ತ ನಿರ್ಧಾರ ತೆಗೆದುಕೊಳ್ಳಲು ಸೂಚಿಸಿದ್ದಾರೆ.

ವಿಡಿಯೋ ಕಾನ್ಫರೆನ್ಸ್ ನಲ್ಲಿ ಜಿಲ್ಲಾಧಿಕಾರಿ ಸಿಂಧೂ ಬಿ.ರೂಪೇಶ್, ಜಿಲ್ಲಾ ಉಸ್ತುವಾರಿ ಸಚಿವ ಕೋಟ ಶ್ರೀನಿವಾಸ್ ಪೂಜಾರಿ, ಜಿ.ಪಂ ಸಿ.ಇ.ಓ, ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಸೇರಿದಂತೆ ಅಧಿಕಾರಿಗಳು ಪಾಲ್ಗೊಂಡಿದ್ದರು.

ವಿಡಿಯೋ ಕಾನ್ಫರೆನ್ಸ್ ಬಳಿಕ ದ.ಕ. ಜಿಲ್ಲಾಧಿಕಾರಿ ನೇತೃತ್ವದಲ್ಲಿ ಸಭೆ ನಡೆಸಿ ಜಿಲ್ಲೆಯಲ್ಲಿ ಲಾಕ್​ಡೌನ್ ಕುರಿತು ನಿರ್ಧಾರ ಕೈಗೊಳ್ಳಲು ತೀರ್ಮಾನಿಸಲಾಗಿದೆ. ಜನಪ್ರತಿನಿಧಿಗಳು, ಅಧಿಕಾರಿಗಳ ಅಭಿಪ್ರಾಯ ಸಂಗ್ರಹಿಸಿ ಒಮ್ಮತದ ತೀರ್ಮಾನ ಕೈಗೊಳ್ಳಲಿದ್ದಾರೆ. 

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)