varthabharthi


ರಾಷ್ಟ್ರೀಯ

ಮಧ್ಯಪ್ರದೇಶ ಸಿಎಂ ಶಿವರಾಜ್ ಸಿಂಗ್ ಚೌಹಾಣ್ ರಿಗೆ ಕೊರೋನ ದೃಢ

ವಾರ್ತಾ ಭಾರತಿ : 25 Jul, 2020

ಭೋಪಾಲ, ಜು.25: ಮಧ್ಯಪ್ರದೇಶದ ಮುಖ್ಯಮಂತ್ರಿ ಶಿವರಾಜ್ ಸಿಂಗ್ ಚೌಹಾಣ್‌ಗೆ ಕೊರೋನ ಸೋಂಕು ಶನಿವಾರ ದೃಢಪಟ್ಟಿದ್ದು ಅವರನ್ನು ಭೋಪಾಲದ ಚಿರಾಯು ಆಸ್ಪತ್ರೆಗೆ ದಾಖಲಿಸಲಾಗಿದೆ ಎಂದು ವರದಿಯಾಗಿದೆ.

ತನಗೆ ಕೊರೋನ ಸೋಂಕು ದೃಢಪಟ್ಟಿದ್ದು ಎಲ್ಲಾ ಶಿಷ್ಟಾಚಾರಗಳನ್ನು ಪಾಲಿಸುತ್ತಿದ್ದೇನೆ. ವೈದ್ಯರ ಸಲಹೆ ಮೇರೆಗೆ ಸ್ವಯಂ ಕ್ವಾರಂಟೈನ್‌ಗೆ ಒಳಪಟ್ಟಿದ್ದು ಎಲ್ಲಾ ಸಹೋದ್ಯೋಗಿಗಳು ಸೋಂಕು ತಗುಲದಂತೆ ಮುನ್ನೆಚ್ಚರಿಕೆ ವಹಿಸಬೇಕು ಮತ್ತು ತನ್ನ ಸಂಪರ್ಕಕ್ಕೆ ಬಂದವರೆಲ್ಲಾ ಸೋಂಕು ಪರೀಕ್ಷೆ ನಡೆಸಬೇಕೆಂದು ಚೌಹಾಣ್ ಟ್ವೀಟ್ ಮಾಡಿದ್ದಾರೆ.

ಶನಿವಾರ ಮಧ್ಯಾಹ್ನ 11:30ರ ವೇಳೆ ಮುಖ್ಯಮಂತ್ರಿ ನೇತೃತ್ವದಲ್ಲಿ ಸಭೆ ನಡೆಯಬೇಕಿತ್ತು. ತನ್ನ ಅನುಪಸ್ಥಿತಿಯಲ್ಲಿ ಗೃಹ ಸಚಿವ ನರೋತ್ತಮ ಮಿಶ್ರಾ, ಆರೋಗ್ಯ ಸಚಿವ ವಿಶ್ವಾಸ್ ಸಾರಂಗ್ ಹಾಗೂ ಇತರ ಸಚಿವರು ಸಭೆಯ ನೇತೃತ್ವ ವಹಿಸಲಿದ್ದಾರೆ ಎಂದು ಚೌಹಾಣ್ ಹೇಳಿದ್ದಾರೆ.

ಗುರುವಾರ ಮಧ್ಯಪ್ರದೇಶದ ಸಚಿವ ಅರವಿಂದ್ ಸಿಂಗ್ ಭದೋರಿಯಾಗೆ ಕೂಡಾ ಸೋಂಕು ದೃಢಪಟ್ಟಿತ್ತು. ಬುಧವಾರ ಚೌಹಾಣ್ ನೇತೃತ್ವದಲ್ಲಿ ನಡೆದಿದ್ದ ಸಭೆಯಲ್ಲಿ ಭದೋರಿಯಾ ಪಾಲ್ಗೊಂಡಿದ್ದರು.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)