varthabharthi


ಕರಾವಳಿ

ದ.ಕ. ಜಿಲ್ಲಾಧಿಕಾರಿ ಸಿಂಧೂ ರೂಪೇಶ್ ವರ್ಗಾವಣೆ

ವಾರ್ತಾ ಭಾರತಿ : 28 Jul, 2020

ಮಂಗಳೂರು, ಜು.28: ದಕ್ಷಿಣ ಕನ್ನಡ ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಅವರನ್ನು ತಕ್ಷಣದಿಂದ ಜಾರಿಯಾಗುವಂತೆ ವರ್ಗಾವಣೆಗೊಳಿಸಿ ರಾಜ್ಯ ಸರಕಾರ ಆದೇಶ ಹೊರಡಿಸಿದೆ.

ನೂತನ ಜಿಲ್ಲಾಧಿಕಾರಿಯಾಗಿ ಬೆಳಗಾವಿ ಜಿಲ್ಲಾ ಪಂಚಾಯತ್ ಸಿಇಒ ಆಗಿದ್ದ ಡಾ.ರಾಜೇಂದ್ರ ಕೆ.ವಿ. ಅವರನ್ನು ನೇಮಕಗೊಳಿಸಲಾಗಿದೆ.

ಸಿಂಧೂ ರೂಪೇಶ್ ಅವರನ್ನು ಎಲೆಕ್ಟ್ರಾನಿಕ್ ಡೆಲಿವರಿ ಆಫ್ ಸಿಟಿಝನ್ ಸರ್ವೀಸ್(ಈಡಿಸಿಎಸ್) ನಿರ್ದೇಶಕರಾಗಿ ನಿಯೋಜಿಸಲಾಗಿದೆ.

ಸರಕಾರವು ದ.ಕ. ಜಿಲ್ಲಾಧಿಕಾರಿ ಸಿಂಧೂ ಬಿ. ರೂಪೇಶ್ ಸೇರಿದಂತೆ 14 ಐಎಎಸ್ ಅಧಿಕಾರಿಗಳನ್ನು ವರ್ಗಾವಣೆಗೊಳಿಸಿ ಆದೇಶ ಹೊರಡಿಸಿದೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)