varthabharthi


ಮಾಹಿತಿ - ಮಾರ್ಗದರ್ಶನ

ಫಾರ್ಮಸಿಸ್ಟ್ ಹುದ್ದೆಗೆ ಅರ್ಜಿ ಆಹ್ವಾನ

ವಾರ್ತಾ ಭಾರತಿ : 29 Jul, 2020

ಉಡುಪಿ, ಜು.29: ಕೋವಿಡ್-19ರ ಹಿನ್ನಲೆಯಲ್ಲಿ ಉಡುಪಿ ಜಿಲ್ಲೆಯಲ್ಲಿ ಖಾಲಿ ಇರುವ 26 ಫಾರ್ಮಸಿಸ್ಟ್ ಹುದ್ದೆಗಳಿಗೆ 6 ತಿಂಗಳ ತಾತ್ಕಾಲಿಕ ಅವಧಿಗೆ ಅಥವಾ ನೇರ ನೇಮಕಾತಿ ಹುದ್ದೆಗಳು ಭರ್ತಿಯಾಗುವವರೆಗೆ, ಗುತ್ತಿಗೆ ಆಧಾರದಲ್ಲಿ ಭರ್ತಿ ಮಾಡಲು ಅರ್ಜಿ ಆಹ್ವಾನಿಸಲಾಗಿದೆ.

ಮಾಸಿಕ ವೇತನ 20,000ರೂ. ನೀಡಲಾಗುತ್ತದೆ. ರಾಜ್ಯ ಸರಕಾರದಿಂದ ಮಾನ್ಯತೆ ಪಡೆದ ಸಂಸ್ಥೆಯಿಂದ, ಡಿಪ್ಲಾಮೋ ಇನ್ ಫಾರ್ಮಸಿ ಮತ್ತು ಕರ್ನಾಟಕ ಫಾರ್ಮಸಿ ಕೌನ್ಸಿಲ್‌ನಲ್ಲಿ ಕಡ್ಡಾಯ ನೊಂದಣಿ ಮಾಡಿರುವ ಅಭ್ಯರ್ಥಿಗಳು, ತಮ್ಮ ಅರ್ಜಿಯನ್ನು ಆ.3ರೊಳಗೆ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿಯವರ ಕಛೇರಿ ಅಜ್ಜರಕಾಡು, ಉಡುಪಿ ಜಿಲ್ಲಾಸ್ಪತ್ರೆಗೆ ಸಲ್ಲಿಸಬೇಕು ಎಂದು ಉಡುಪಿ ಜಿಲ್ಲಾ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಅಧಿಕಾರಿ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)