varthabharthi


ಕರಾವಳಿ

ಮಂಚಿ: ವಾಹನ ಅಪಘಾತದ ಗಾಯಾಳು ಯುವಕ ಮೃತ್ಯು

ವಾರ್ತಾ ಭಾರತಿ : 1 Aug, 2020

ಬಂಟ್ವಾಳ, ಆ.1: ಮೆಲ್ಕಾರ್ ಟ್ರಾಫಿಕ್ ಪೊಲೀಸ್ ಠಾಣಾ ವ್ಯಾಪ್ತಿಯ ಮಂಚಿ ಮಸೀದಿಯ ಬಳಿ ನಿನ್ನೆ ಸಂಜೆ ನಡೆದಿದ್ದ ಅಪಘಾತದಲ್ಲಿ ಗಾಯಗೊಂಡಿದ್ದ ಬೈಕ್ ಸವಾರನೋರ್ವ ಚಿಕಿತ್ಸೆ ಫಲಕಾರಿಯಾಗದೆ ಇಂದು ಮುಂಜಾನೆ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾನೆ.

ಬೋಳಂತರು ನಿವಾಸಿ ಉನೈಸ್(17) ಮೃತಪಟ್ಟ ಯುವಕ.

ಶುಕ್ರವಾರ ಸಂಜೆ ಸುಮಾರು 6 ಗಂಟೆಯ ವೇಳೆ ಮಂಚಿ ಮಸೀದಿಯ ಬಳಿ ಅಪಘಾತ ಸಂಭವಿಸಿದೆ. ಉನೈಸ್ ಮಂಚಿ ಮಸೀದಿಯ ಬಳಿ ಲಾರಿಯೊಂದನ್ನು ಓವರ್ ಟೇಕ್ ಮಾಡುವ ಭರದಲ್ಲಿ ರಿಕ್ಷಾಕ್ಕೆ ಢಿಕ್ಕಿಹೊಡೆದು ಬಳಿಕ ಲಾರಿಗೆ ಢಿಕ್ಕಿಯಾಗಿ ರಸ್ತೆಗೆ ಎಸೆಯಲ್ಪಟ್ಟು ಗಂಭೀರ ಗಾಯಗೊಂಡಿದ್ದರು. ಕೂಡಲೇ ಅವರನ್ನು ಮಂಗಳೂರಿನ ಖಾಸಗಿ ಆಸ್ಪತ್ರೆಗೆ ದಾಖಲಿಸಲಾಗಿತ್ತು.

ಆದರೆ ಚಿಕಿತ್ಸೆ ಫಲಕಾರಿಯಾಗದೆ ಯುವಕ ಮುಂಜಾನೆ ವೇಳೆ ಆಸ್ಪತ್ರೆಯಲ್ಲಿ ಮೃತಪಟ್ಟಿರುವುದಾಗಿ ಕುಟುಂಬ ಮೂಲಗಳು ತಿಳಿಸಿವೆ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)