varthabharthi


ರಾಷ್ಟ್ರೀಯ

ಅಯೋಧ್ಯೆ ಕಾರ್ಯಕ್ರಮಕ್ಕೆ ಅಡ್ವಾಣಿ, ಜೋಶಿಗೆ ಆಹ್ವಾನವಿಲ್ಲ

ವಾರ್ತಾ ಭಾರತಿ : 1 Aug, 2020

ಹೊಸದಿಲ್ಲಿ, ಆ.1 : ಉತ್ತರಪ್ರದೇಶದ ಅಯೋಧ್ಯೆಯಲ್ಲಿ ಆಗಸ್ಟ್ 5ರಂದು ನಿಗಧಿಯಾಗಿರುವ ರಾಮಮಂದಿರ ನಿರ್ಮಾಣ ಭೂಮಿ ಪೂಜೆಗೆ ಬಿಜೆಪಿ ಹಿರಿಯ ನಾಯಕರಾದ ಎಲ್.ಕೆ. ಅಡ್ವಾಣಿ ಹಾಗೂ ಮುರಳಿ ಮನೋಹರ ಜೋಶಿಗೆ ಆಹ್ವಾನ ನೀಡಲಾಗಿಲ್ಲ. ಕೇಂದ್ರದ ಮಾಜಿ ಸಚಿವೆ ಉಮಾ ಭಾರತಿ ಹಾಗೂ ಉತ್ತರಪ್ರದೇಶದ ಮಾಜಿ ಮುಖ್ಯ,ಮಂತ್ರಿ ಕಲ್ಯಾಣ ಸಿಂಗ್‍ಗೆ ಆಹ್ವಾನ ನೀಡಲಾಗಿದೆ. 

ಅಡ್ವಾಣಿ ಕಳೆದ ವಾರ ಮಸೀದಿ ದ್ವಂಸ ಪ್ರಕರಣಕ್ಕೆ ಸಂಬಂಧಿಸಿ ವಿಡೀಯೋ ಲಿಂಕ್ ಮೂಲಕ ಲಕ್ನೋದ ಸಿಬಿಐ ವಿಶೇಷ ನ್ಯಾಯಾಲಯದ ಮುಂದೆ ಹಾಜರಾಗಿದ್ದರು. 92 ವಯಸ್ಸಿನ ಅಡ್ವಾಣಿ ಪ್ರಕರಣಕ್ಕೆ ಸಂಬಂಧಿಸಿ ನಾಲ್ಕುವರೆ ಗಂಟೆ ನಡೆದ ವಿಚಾರಣೆಯಲ್ಲಿ ಒಂದು ಸಾವಿರಕ್ಕೂ ಹೆಚ್ಚು ಪ್ರಶ್ನೆಗಳಿಗೆ ಉತ್ತರಿಸಿದ್ದಾರೆ. ತನ್ನ ಮೇಲಿನ ಆರೋಪಗಳನ್ನು ನಿರಾಕರಿಸಿದ್ದಾರೆ ಎಂದು ಅಡ್ವಾಣಿಯವರ ವಕೀಲ ತಿಳಿಸಿದ್ದಾರೆ.

ಲಕ್ನೋ ನ್ಯಾಯಾಲಯಕ್ಕೆ ತನ್ನ ಹೇಳಿಕೆಯನ್ನು ದಾಖಲಿಸಿದ್ದ ಇನ್ನೋರ್ವ ಹಿರಿಯ ನಾಯಕ ಎಮ್.ಎಮ್. ಜೋಶಿಗೆ ಕಾರ್ಯಕ್ರಮಕ್ಕೆ ಆಹ್ವಾನ ನೀಡಲಾಗಿಲ್ಲ.

‘ವಾರ್ತಾ ಭಾರತಿ’ ನಿಮಗೆ ಆಪ್ತವೇ ? ಇದರ ಸುದ್ದಿಗಳು ಮತ್ತು ವಿಚಾರಗಳು ಎಲ್ಲರಿಗೆ ಉಚಿತವಾಗಿ ತಲುಪುತ್ತಿರಬೇಕೇ? 

ಬೆಂಬಲಿಸಲು ಇಲ್ಲಿ  ಕ್ಲಿಕ್ ಮಾಡಿ

Comments (Click here to Expand)